ರಾಜ್ಯದಲ್ಲಿ ಇಂದು ಒಟ್ಟು 470 ಕೇಸ್, 9 ಸಾವು- ಬೆಂಗಳೂರಿನಲ್ಲಿ 232 ಪ್ರಕರಣ

1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 470 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ನಿನ್ನೆಗಿಂತ ಹೆಚ್ಚು ಪ್ರಕರಣಗಳು ದಾಖಲಾಗಿದೆ. 232 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 122 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 1 ಮರಣ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ 368 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,671 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,82,869 ಮಂದಿಗೆ ಕೊರೊನಾ ಬಂದಿದೆ. 29,35,238 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.91 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.50 ರಷ್ಟಿದೆ. ಇದನ್ನೂ ಓದಿ: 20 ನಿಮಿಷದಲ್ಲಿ ವಿಶ್ವವಿಖ್ಯಾತ ಮೈಸೂರಿನ ಜಂಬೂಸವಾರಿ ಮುಕ್ತಾಯ

ಇಂದು ರಾಜ್ಯದಲ್ಲಿ ಇಂದು ಕಡಿಮೆ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದ್ದು, ಒಟ್ಟು 38,002 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 93,806 ಸ್ಯಾಂಪಲ್ (ಆರ್‍ಟಿ ಪಿಸಿಆರ್ 79,668 + 14,138 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಇನ್ನೂ 9 ದಿನ ವಿಸ್ತರಣೆ: ಬೊಮ್ಮಾಯಿ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 232, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 8, ಚಿತ್ರದುರ್ಗ 3, ದಕ್ಷಿಣ ಕನ್ನಡ 36, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 16, ಹಾವೇರಿ 0, ಕಲಬುರಗಿ 0, ಕೊಡಗು 22, ಕೋಲಾರ 9, ಕೊಪ್ಪಳ 0, ಮಂಡ್ಯ 16, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 4, ತುಮಕೂರು 16, ಉಡುಪಿ 14, ಉತ್ತರ ಕನ್ನಡ 11, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *