ನವದೆಹಲಿ: ಒಡಿಶಾದಲ್ಲಿ (Odisha) ಸಂಭವಿಸಿದ ಭೀಕರ ರೈಲು ಅಪಘಾತದಿಂದಾಗಿ (Train Accident) 238 ಮಂದಿ ಮೃತಪಟ್ಟಿದ್ದು, ಸುಮಾರು 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನಲೆ 48 ರೈಲು ಸಂಚಾರವನ್ನು ರದ್ದುಗೊಳಿಸಿದ್ದು, 39 ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ.
Advertisement
ಅಪಘಾತದ ಹಿನ್ನಲೆ ಹಲವಾರು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಅಲ್ಲದೇ 10 ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇದನ್ನೂ ಓದಿ: Odisha Train Tragedy; ಪುಣ್ಯಕ್ಷೇತ್ರಕ್ಕೆ ಹೊರಟಿದ್ದ ಚಿಕ್ಕಮಗಳೂರಿನ 110 ಮಂದಿ ಯಾತ್ರಾರ್ಥಿಗಳು ಸೇಫ್
Advertisement
Advertisement
ತಿರುವನಂತಪುರಂ-ಕೋಲ್ಕತ್ತಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (22641), ಬೆಂಗಳೂರು-ಗುವಾಹಟಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12509) ಮತ್ತು ಹೌರಾ-ತಿರುಪತಿ ಹಮ್ಸಾಫರ್ ಎಕ್ಸ್‌ಪ್ರೆಸ್ (20889) ರೈಲುಗಳು ರದ್ದಾಗಿವೆ. ಕನ್ಯಾಕುಮಾರಿ-ದಿಬ್ರುಗಢ್ ವಿವೇಕ್ ಎಕ್ಸ್‌ಪ್ರೆಸ್ (22503) ಮತ್ತು ಹೌರಾ-ಮೈಸೂರು ಎಕ್ಸ್‌ಪ್ರೆಸ್ (22817) ರೈಲು ಮಾರ್ಗ ಬದಲಾಯಿಸಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು
Advertisement
ಇದರೊಂದಿಗೆ ರದ್ದಾದ ಮತ್ತು ಮಾರ್ಗ ಬದದಲಾವಣೆ ಮಾಡಿ ಸಂಚರಿಸಲಿರುವ ರೈಲುಗಳ ಪಟ್ಟಿ ಈ ಕೆಳಗಿನಂತಿವೆ. ರೈಲುಗಳಲ್ಲಿ ಸಂಚರಿಸುವವರು ಮಾಹಿತಿಯನ್ನು ಪಡೆದುಕೊಂಡು ಸಂಚರಿಸಬೇಕೆಂದು ರೈಲ್ವೆ ಇಲಾಖೆ ಮನವಿ ಮಾಡಿದೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ