ಬೆಂಗಳೂರು: ಇಂದು ಕರ್ನಾಟಕದಲ್ಲಿ 490 ಮಂದಿಗೆ ಕೊರೊನಾ ಬಂದಿದ್ದು, ಆಸ್ಪತ್ರೆಯಿಂದ 389 ಜನ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ಕೊರೊನಾಗೆ ಬಲಿಯಾಗಿದ್ದಾರೆ.
Advertisement
ಇಂದು ರಾಜ್ಯದಲ್ಲಿ ಒಟ್ಟು 66,848 ಮಂದಿಗೆ ಲಸಿಕೆ ನೀಡಲು ಯೋಜನೆ ಹಾಕಿಕೊಳ್ಳಲಾಗಿತ್ತು. ಈ ಪೈಕಿ 21,935 (ಶೇ.33)ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.
Advertisement
Advertisement
ಇಂದು ರಾಯಚೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,47,736 ಕ್ಕೆ ಏರಿಕೆ ಆಗಿದೆ. ಈ ಪೈಕಿ 9,29,447 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,978 ಸಕ್ರಿಯ ಪ್ರಕರಣಗಳಿವೆ.
Advertisement
ಒಟ್ಟು ಇಲ್ಲಿಯವರೆಗೆ 12,292 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 127 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 3,846 ಆಂಟಿಜನ್ ಟೆಸ್ಟ್, 54,544 ಆರ್ ಟಿ ಪಿಸಿಆರ್ ಸೇರಿದಂತೆ ಒಟ್ಟು 58,390 ಮಂದಿಗೆ ಪರೀಕ್ಷೆ ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ 278 ಕೇಸ್ ವರದಿಯಾಗಿದೆ. ತುಮಕೂರು 25, ಮೈಸೂರು 20, ಕೋಲಾರ, ಹಾಸನ ಮತ್ತು ದಕ್ಷಿಣ ಕನ್ನಡ 17, ಉಡುಪಿ 16, ಮತ್ತು ಬೀದರ್ ನಲ್ಲಿ 15 ಮಂದಿಗೆ ಸೋಂಕು ಬಂದಿದೆ. ಒಟ್ಟು 127 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 62, ಕಲಬುರಗಿ 9, ತುಮಕೂರು 8, ಮೈಸೂರು ಮತ್ತು ಹಾಸನ 5, ವಿಜಯಪುರ 4 ಮತ್ತು ದಕ್ಷಿಣ ಕನ್ನಡದ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.