ಚಿಕ್ಕಮಗಳೂರು: ಅಪ್ಪನ ಜೊತೆ ಜಗಳವಾಡಿ ನಾಲ್ಕನೇ ತರಗತಿ ಓದುತ್ತಿದ್ದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ.
ಚೇತನ್ (9) ಮೃತ ಬಾಲಕ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಶೇಷಗಿರಿ ಗ್ರಾಮದವರಾಗಿರುವ ಬಾಲಕನ ಪೋಷಕರು ಕಳೆದ ನಾಲ್ಕೈದು ವರ್ಷಗಳ ಹಿಂದೆ ಕುಟುಂಬವು ಆಲ್ದೂರಿಗೆ ಬಂದಿತ್ತು. ಇಬ್ಬರು ಗಂಡು ಮಕ್ಕಳೊಂದಿಗೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಕಾಫಿತೋಟಗಳಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಇದನ್ನೂ ಓದಿ: ಅತಂತ್ರ ಸ್ಥಿತಿಯಲ್ಲಿರೋ ಉಕ್ರೇನ್ ರಿಟರ್ನ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ..?
Advertisement
Advertisement
ಕುಟುಂಬವು ಆಗಾಗ್ಗೆ ರಾಣಿಬೆನ್ನೂರಿಗೆ ಹೋಗಿ ಬರುತ್ತಿತ್ತು. ಮೃತನು ತುಸು ಸಿಟ್ಟಿನ ಬಾಲಕನಾಗಿದ್ದ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಆಗಾಗ್ಗೆ ಕೆಲ ವಿಚಾರಗಳಿಗೆ ಅಪ್ಪ-ಅಮ್ಮನ ಜೊತೆ ಜಗಳವಾಡುತ್ತಿದ್ದನು. ಇದನ್ನೂ ಓದಿ: ಆಲೂಗಡ್ಡೆ, ಟೊಮೆಟೊ ಬೆಲೆ ಪರಿಶೀಲಿಸಲು ನಾನು ರಾಜಕೀಯ ಸೇರಿಲ್ಲ – ಪಾಕ್ ಪ್ರಧಾನಿ
Advertisement
ನಾಲ್ಕು ದಿನಗಳ ಹಿಂದೆ ಸ್ವಂತ ಊರು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜಾತ್ರೆ ಇದ್ದ ಕಾರಣ ಎಲ್ಲರೂ ಹೋಗಿದ್ದರು. ಈ ವೇಳೆ ಅಪ್ಪನ ಜೊತೆ ಜಗಳವಾಡಿದ ಬಾಲಕ ಮನೆಯಲ್ಲಿನ ಜೋಕಾಲಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಓದಿನಲ್ಲಿ ಚುರುಕು ಹಾಗೂ ಸದಾ ಲವಲವಿಕೆಯಿಂದ ಇರುತ್ತಿದ್ದ. ಬಾಲಕನ ಸಾವಿಗೆ ಶಾಲೆಯ ಶಿಕ್ಷಕ ವರ್ಗ ಕೂಡ ಬೇಸರ ವ್ಯಕ್ತಪಡಿಸಿದೆ. ಆತನ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ. ಆತ್ಮಹತ್ಯೆ ಪದದ ಅರ್ಥವೇ ತಿಳಿಯದ ಎಳೆ ವಯಸ್ಸಿನ ಮಕ್ಕಳು ಈ ರೀತಿಯ ದುಸ್ಸಾಹಕ್ಕೆ ಕೈಹಾಕುತ್ತಿದ್ದಾರೆ ಎಂದರೆ ಆಧುನಿಕ ಸಮಾಜ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಮೂಡಿದೆ.