ಪುಣೆ: ಭಯೋತ್ಪಾದಕರಿಗೆ ಧನಸಹಾಯ ಮಾಡುತ್ತಿದ್ದ 4ನೇ ಶಂಕಿತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.
ಎಟಿಎಸ್ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಭಯೋತ್ಪಾದಕ ಸಂಘಟನೆಗೆ ಕಾರ್ಯಕರ್ತರ ನೇಮಕಾತಿ ಮತ್ತು ಧನಸಹಾಯ ಪ್ರಕರಣದಲ್ಲಿ ಭಾಗಿಯಾಗಿದ್ದ 4ನೇ ಶಂಕಿತನನ್ನು ಬಂಧಿಸಲಾಗಿದೆ. ಈತ ಜಮ್ಮು-ಕಾಶ್ಮೀರಾದವನು ಎಂದು ತಿಳಿಸಿದ್ದಾರೆ.
Advertisement
Advertisement
ಭಯೋತ್ಪಾದಕ ಸಂಘಟನೆಗೆ ಕಾರ್ಯಕರ್ತರ ನೇಮಕಾತಿ ಮತ್ತು ಧನಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ ತಿಂಗಳಲ್ಲಿ ಎಟಿಎಸ್ ಅಧಿಕಾರಿಗಳು ಮೂರು ಆರೋಪಿಗಳನ್ನು ಬಂಧಿಸಿದ್ದರು. ಈಗ ಮತ್ತೊಬ್ಬ ಸಿಕ್ಕಿದ್ದು, ಉಳಿದವರಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆ ಮೇಲೆ ದಾಳಿಗೆ ಯೋಜಿಸಿದ್ದ ಮೂವರು ಉಗ್ರರ ಹತ್ಯೆ
Advertisement
Advertisement
ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಈತ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯವನಾಗಿದ್ದು, ಪುಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಮಂಗಳವಾರ ಕೋರ್ಟ್ ಮುಂದೆ ಹಾಜರು ಪಡಿಸುತ್ತೇವೆ. ಪ್ರಸ್ತುತ ಬಂಧಿತನು ಜುವಾನಿದ್ ಮೊಹಮ್ಮದ್ ಖಾತೆಗೆ ಹಣ ಕಳುಹಿಸುತ್ತಿರುವುದು ಪತ್ತೆಯಾಗಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ 24 ರಂದು ಒಬ್ಬನನ್ನು ಅರೆಸ್ಟ್ ಮಾಡಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.