ಧರ್ಮಶಾಲಾ: 4ನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.
ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 19 ರನ್‍ಗಳಿಸಿದ್ದ ಭಾರತ ಇಂದು 23.5 ಓವರ್‍ಗಳಲ್ಲಿ 106 ಗಳಿಸುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು.
Advertisement
ಕೆಎಲ್ ರಾಹುಲ್ ಔಟಾಗದೇ 51 ರನ್(76 ಎಸೆತ, 4 ಬೌಂಡರಿ) ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ ಔಟಾಗದೇ 38 ರನ್(27 ಎಸೆತ,4 ಬೌಂಡರಿ, 2 ಸಿಕ್ಸರ್) ಹೊಡೆಯುವ ಮೂಲಕ ಭಾರತ ಗೆಲುವಿಗೆ ಕಾರಣರಾದರು.
Advertisement
ಮೊದಲ ಇನ್ನಿಂಗ್ಸ್ ನಲ್ಲಿ 63 ರನ್(95 ಎಸೆತ, 4 ಬೌಂಡರಿ, 4 ಸಿಕ್ಸರ್) ಸಿಡಿಸಿ ಎರಡೂ ಇನ್ನಿಂಗ್ಸ್ ನಲ್ಲಿ ಒಟ್ಟು 4 ವಿಕೆಟ್ ಪಡೆದ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಷ್ಟೇ ಅಲ್ಲದೇ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನಕ್ಕೆ ಜಡೇಜಾಗೆ ಸರಣಿಶ್ರೇಷ್ಠ ಪ್ರಶಸ್ತಿ ಸಿಕ್ಕಿತು.
Advertisement
ಪುಣೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 333 ರನ್‍ಗಳಿದ್ದ ಗೆದ್ದುಕೊಂಡಿದ್ದರೆ, ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಂಡಿತು. ರಾಂಚಿಯಲ್ಲಿ ನಡೆದ ಮೂರನೇ ಪಂದ್ಯ ಡ್ರಾ ಕಂಡಿತ್ತು.
Advertisement
4ನೇ ಟೆಸ್ಟ್ ಸಂಕ್ಷೀಪ್ತ ಸ್ಕೋರ್:
ಆಸ್ಟ್ರೇಲಿಯಾ 300 ಮತ್ತು 137
ಭಾರತ 332 ಮತ್ತು 106/2
CHAMPIONS!!! #TeamIndia #INDvAUS pic.twitter.com/2R1b1TDBoX
— BCCI (@BCCI) March 28, 2017
It's been a incredible season!Grateful to be part of such a magnificent team @anilkumble1074 @ImSanjayBangar @BCCI pic.twitter.com/W453COBdFU
— R SRIDHAR (@coach_rsridhar) March 28, 2017