ನವದೆಹಲಿ: ಭಾರತದಲ್ಲಿ 5ಜಿ ನೆಟ್‍ವರ್ಕ್ ಸ್ಥಾಪನೆಯ ವಿರುದ್ಧ ನಟಿ ಹಾಗೂ ಪರಿಸರವಾದಿ ಜೂಹಿ ಚಾವ್ಲಾ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 5ಜಿ ನೆಟ್‍ವರ್ಕ್‍ನಿಂದಾಗಿ ಮನುಷ್ಯರಿಗೆ, ಪ್ರಾಣಿ, ಪಕ್ಷಿ ಮತ್ತು ಸಸ್ಯ ಪ್ರಭೇದಗಳಿಗೆ ಸಮಸ್ಯೆಯಾಗುತ್ತದೆ ಎಂದು ದೂರಿದ್ದಾರೆ.
ದೂರಿನಲ್ಲಿ ಏನಿದೆ?
ಭಾರತದಲ್ಲಿ 5ಜಿಯನ್ನು ಜಾರಿಗೆ ತಂದರೆ ದೇಶದಲ್ಲಿರುವ ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ, ಸಸ್ಯ ಪ್ರಭೇದಗಳು 5ಜಿಯ ವಿಕಿರಣದಿಂದಾಗುವ ತೊಂದರೆಗಳನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ದಿನದ 24 ಗಂಟೆ, ವರ್ಷದ 365 ದಿನ, ಈಗಿರುವ ನೆಟ್‍ವರ್ಕ್ ವಿಕಿರಣಗಳಿಂದ ರೇಡಿಯೋ ಫ್ರಿಕ್ವೆನ್ಸಿ ವಿಕಿರಣ 10x ರಿಂದ 100x ಪಟ್ಟು ಹೆಚ್ಚಾಗಿರುತ್ತದೆ.ಇದನ್ನೂ ಓದಿ: ಬಂಡೀಪುರ ಪ್ರವಾಸ ಮಾಡಿ ಗಿಡ ನೆಟ್ಟ ಪ್ರೇಮಲೋಕ ಚೆಲುವೆ ಜೂಹಿ ಚಾವ್ಲಾ
5ಜಿ ಯೋಜನೆಗಳಿಂದಾಗಿ ಮನುಷ್ಯರ ಮೇಲೆ ಹಲವು ದುಷ್ಪರಿಣಾಮಗಳಿದ್ದು, ಮುಂದೆ ಬದಲಾಯಿಸಲು ಸಾಧ್ಯವಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಮನುಷ್ಯರ ಮೇಲೆ ಮಾತ್ರವಲ್ಲದೇ ಭೂಮಿಯ ಮೇಲಿರುವ ಎಲ್ಲಾ ಪರಿಸರ ವ್ಯವಸ್ಥೆಗೆ ಇದರಿಂದ ತೊಂದರೆ ಎದುರಾಗುತ್ತದೆ.
5ಜಿಯಿಂದ ಮಾನವಕುಲದ, ಪುರುಷ, ಮಹಿಳೆ, ಮಗು, ವಯಸ್ಕ, ಶಿಶು, ಪ್ರಾಣಿ ಮತ್ತು ಎಲ್ಲಾ ವಿದಧ ಜೀವಿಗಳಿಗೂ ಇದರಿಂದ ಯಾವುದೇ ದುಷ್ಟರಿಣಾಮಗಳಿಲ್ಲ ಎಂದು ಪರೀಕ್ಷಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಬೇಕೆಂದು ವಕೀಲರಾದ ದೀಪಕ್ ಖೋಸ್ಲಾ ಅವರ ಮೂಲಕ ಸಲ್ಲಿಸಲಾಗಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಭೂಮಿ ರಹಿತ ರೈತರ ಸಹಾಯಕ್ಕೆ ಮುಂದಾದ ಜೂಹಿ ಚಾವ್ಲಾ
ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಸಿ.ಹರಿಶಂಕರ್ ಅವರು ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಿದ್ದು ಮಂಗಳವಾರ ವಿಚಾರಣೆ ನಡೆಯಲಿದೆ.