ಗುವಾಹಟಿ: ಅಸ್ಸಾಂನಲ್ಲಿ (Assam) ಸೋಮವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದೆ.
ಬ್ರಹ್ಮಪುತ್ರದ ದಕ್ಷಿಣ ದಂಡೆಯಲ್ಲಿರುವ ಮೋರಿಗಾಂವ್ (Morigaon) ಜಿಲ್ಲೆಯಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದ್ದು, 50 ಕಿಲೋಮೀಟರ್ ಆಳದಲ್ಲಿ ಹುಟ್ಟಿಕೊಂಡಿದೆ. ಕಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಮತ್ತು ಪಶ್ಚಿಮ ಕರ್ಬಿ ಅಂಗ್ಲಾಂಗ್ ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಚರೈಡಿಯೊ, ಕ್ಯಾಚಾರ್, ಕರೀಮ್‌ಗಂಜ್, ಹೈಲಕಂಡಿ, ಧುಬ್ರಿಯಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಭಯಭೀತರಾದ ಜನರು ಮನೆಯಿಂದ ಹೊರಗೆ ಓಡಿದ್ದಾರೆ. ಇದನ್ನೂ ಓದಿ: ಸುಳ್ಯ | ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ
ಮಧ್ಯ ಪಶ್ಚಿಮ ಅರುಣಾಚಲ ಪ್ರದೇಶದ ಕೆಲವು ಭಾಗಗಳು, ಇಡೀ ಮೇಘಾಲಯ ರಾಜ್ಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಪಶ್ಚಿಮ ಬಂಗಾಳದಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Kogilu Demolition| ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಕೃಷ್ಣಬೈರೇಗೌಡ

