ನವದೆಹಲಿ: ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ(Question Paper Leak) ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಶುಕ್ರವಾರ ಪ್ರಶ್ನೆಪತ್ರಿಕೆ ಸೋರಿಕೆ ವಿಷಯದ ಕುರಿತು ವಿಡಿಯೋ ಸಂದೇಶ ರವಾನಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಸರ್ಕಾರವು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024ಕ್ಕೆ ತಿದ್ದುಪಡಿ ತರಲು ಯೋಜಿಸಿದೆ. ಈ ಪ್ರಸ್ತಾವಿತ ತಿದ್ದುಪಡಿಗಳಿಗೆ ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯಲ್ಲಿ ಹಿಂಸಾಚಾರ: ಆರೋಪಿಗಳ ಪಾಸ್‌ಪೋರ್ಟ್ ರದ್ದು – ದೆಹಲಿ ಪೊಲೀಸರು ಹೇಳಿದ್ದೇನು?
ಪ್ರಧಾನಿ ಮೋದಿ ಅವರ ಘೋಷಣೆಯಂತೆ, ಪರೀಕ್ಷಾ ಸೋರಿಕೆ ಪ್ರಕರಣಗಳ ಶೀಘ್ರ ತನಿಖೆ ಮತ್ತು ವಿಚಾರಣೆಗಾಗಿ ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ಗಳನ್ನು ಸ್ಥಾಪಿಸುವ ನಿಬಂಧನೆಯನ್ನು ಸಹ ಕಾಯ್ದೆಯಲ್ಲಿ ಸೇರಿಸಲಾಗುತ್ತದೆ.
ಪ್ರಸ್ತುತ ವೈಯಕ್ತಿಕ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ 3 ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಇದನ್ನೂ ಓದಿ: PublicTV Explainer: ಶೀಘ್ರವೇ ಭಾರತಕ್ಕೆ ಪ್ಲಾಸ್ಟಿಕ್ ನೋಟು ಎಂಟ್ರಿ? – ಕಾಗದದ ನೋಟುಗಳ ಕಥೆ ಏನು?
