ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲಿ ಚುನಾವಣಾ ಅಧಿಕಾರಿಗಳಿಂದ ಭರ್ಜರಿ ಬೇಟೆ ನಡೆಯುತ್ತಿದೆ. ರಾಜಧಾನಿಯ ಎರಡು ಪ್ರತ್ಯೇಕ ಕಡೆಗಳಲ್ಲಿ ಲಕ್ಷಾಂತರ ರೂ. ಹಣ ಮತ್ತು ನೂರಾರು ಕುಕ್ಕರ್ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಕೊಪ್ಪ ಚೆಕ್‌ಪೋಸ್ಟ್ ಬಳಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.20 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೇತುವೆಯಿಂದ ಬಸ್ ಕೆಳಗೆ ಬಿದ್ದು 5 ಮಂದಿ ಸಾವು
Advertisement
Advertisement
ನಿನ್ನೆ ಚುನಾವಣೆ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಮಧು ಎಂಬವರು ಬ್ಯಾಂಕ್‌ನಿಂದ ಡ್ರಾ ಮಾಡಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಅತ್ತಿಬೆಲೆಯ ಜೆ.ಕೆ ಇಂಡಸ್ಟ್ರೀಸ್‌ಗೆ ತೆಗೆದುಕೊಂಡು ಹೋಗುತ್ತಿದ್ದ ಹಣ ಎನ್ನಲಾಗಿದೆ.
Advertisement
ಚುನಾವಣೆ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಹಣ ಇತ್ತು. ಹಣಕ್ಕೆ ಸೂಕ್ತ ದಾಖಲೆ ನೀಡಿದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ. ಜಿಗಣಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಹಣವನ್ನು ಸೀಜ್ ಮಾಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬೆಂಗಳೂರಿನ ಕಂಪನಿಯಿಂದ ‘ಸೂರ್ಯ ತಿಲಕ ಯಂತ್ರ’ ಕೊಡುಗೆ – ಏನಿದರ ವೈಶಿಷ್ಟ್ಯ?
Advertisement
ಮತ್ತೊಂದೆಡೆ, ಚುನಾವಣೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ನೆಲಮಂಗಲದ ಜಾಸ್ ಟೋಲ್ ಚೆಕ್‌ಪೋಸ್ಟ್‌ನಲ್ಲಿ 302 ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ವಸ್ತುಗಳನ್ನು ಬೆಂಗಳೂರಿನಿಂದ ಹುಬ್ಬಳ್ಳಿಗೆ ಕ್ಯಾಂಟರ್ ವಾಹನ ಮೂಲಕ ಸಾಗಿಸಲಾಗುತ್ತಿತ್ತು. ಚಾಲಕ ಈರಣ್ಣ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿ, ಸುಮಾರು 4 ಲಕ್ಷ ರೂ. ಮೌಲ್ಯದ ಕುಕ್ಕರ್ ವಶಪಡಿಸಿಕೊಂಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.