ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯ ಕೆಲವು ಅಂಗಡಿಗಳ ಮೇಲೆ ಭದ್ರತಾ ಪಡೆಗಳು (Indian Army) ದಾಳಿ ನಡೆಸಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಐದು ಎಕೆ 47 ರೈಫಲ್‍ಗಳು, ಏಳು ಪಿಸ್ತೂಲ್‍ಗಳು, ನಾಲ್ಕು ಹ್ಯಾಂಡ್ ಗ್ರೆನೇಡ್‍ಗಳು ಮತ್ತು ಸ್ಫೋಟಕ್ಕೆ ಬಳಸುವ ಅಪಾರ ಪ್ರಮಾಣದ ಮದ್ದುಗುಂಡುಗಳು ಪತ್ತೆಯಾಗಿದೆ. ಸ್ಫೋಟಕಗಳು ಹಾಗೂ ಅಧುನಿಕ ಶಸ್ತ್ರಾಸ್ತ್ರಗಳು ಹೇಗೆ ಇಲ್ಲಿಗೆ ತಲುಪಿವೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದಿರುವ ಸಂಘಟನೆಗಳು ಹಾಗೂ ವ್ಯಕ್ತಿಗಳ ಬಗ್ಗೆ ಸೇನೆ ಮಾಹಿತಿ ಕಲೆಹಾಕುತ್ತಿದೆ. ಇದನ್ನೂ ಓದಿ: ದೆಹಲಿಯಿಂದ ಪುಣೆಗೆ ಹೊರಡಬೇಕಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ
Advertisement
Advertisement
ಗುಪ್ತಚರ ಮಾಹಿತಿ ಮೇರೆಗೆ ಸೇನೆ ಕೆಲವು ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕಗಳು ಪತ್ತೆಯಾಗಿವೆ. ಸ್ಫೋಟಕಗಳ ಸಂಗ್ರಹದ ಹಿಂದೆ ವಿಧ್ವಂಸಕ ಕೃತ್ಯ ನಡೆಸುವ ಹುನ್ನಾರದ ಬಗ್ಗೆ ಸೇನೆಯ ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ.
Advertisement
Advertisement
ಈ ಪ್ರದೇಶದ ಸುತ್ತಮುತ್ತಲಿನ ಇನ್ನೂ ಅನೇಕ ಸಣ್ಣ ಅಂಗಡಿಗಳು ಹಾಗೂ ಮನೆಗಳಲ್ಲಿ ಶಸ್ತ್ರಾಸ್ತ್ರಗಳು ಇರುವ ಶಂಕೆ ಇದೆ. ಈ ಬಗ್ಗೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಸ್ವಾತಂತ್ರ್ಯ ದಿನದಂದು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಈ ಬಗ್ಗೆ ಗಮನ ಇಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ವಾನಗಳಿಂದಾಗಿ ಜಗಳ- ನೆರೆಮನೆಯ ಇಬ್ಬರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ!
Web Stories