ಬೆಂಗಳೂರು: ರಾಜ್ಯ ಪಠ್ಯಕ್ರಮ ಹೊಂದಿದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟ ಬೆನ್ನಲ್ಲೇ, ಪರೀಕ್ಷೆ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್‌ನಿಂದ ವೇಳಾಪಟ್ಟಿ ಪ್ರಕಟವಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
5ನೇ ತರಗತಿಗೆ ಮಾರ್ಚ್ 27 ರಿಂದ ಮಾರ್ಚ್ 30ರ ವರೆಗೆ ಹಾಗೂ 8ನೇ ತರಗತಿಗೆ ಮಾರ್ಚ್ 27 ರಿಂದ ಏಪ್ರಿಲ್ 1ರ ವರೆಗೆ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಫಲಿತಾಂಶ ವಿದ್ಯಾರ್ಥಿಗೆ ಮಾತ್ರ ತಿಳಿಸಬೇಕು. ಗೌಪ್ಯತೆ ಕಾಪಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.
5ನೇ ತರಗತಿ ವೇಳಾಪಟ್ಟಿ
ಮಾ.27 – ಪ್ರಥಮ ಭಾಷೆ
ಮಾ.28 – ದ್ವಿತೀಯ ಭಾಷೆ
ಮಾ.29 – ಪರಿಸರ ಅಧ್ಯಯನ
ಮಾ.30 – ಗಣಿತ
8ನೇ ತರಗತಿ ವೇಳಾಪಟ್ಟಿ
ಮಾ.27 – ಪ್ರಥಮ ಭಾಷೆ
ಮಾ.28 – ದ್ವಿತೀಯ ಭಾಷೆ
ಮಾ.29 – ತೃತೀಯ ಭಾಷೆ
ಮಾ.30 – ಗಣಿತ
ಮಾ.31 – ವಿಜ್ಞಾನ
ಏ.1 – ಸಮಾಜ ವಿಜ್ಞಾನ