ಬೆಂಗಳೂರು: ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ (Fraud) ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ (Chaithra) ಇಂದು ಜೈಲಿನಿಂದ (Jail) ಬಿಡುಗಡೆಯಾಗಿದ್ದಾರೆ.
ಬರೋಬ್ಬರಿ 2 ತಿಂಗಳ ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬಂದಿದ್ದು, ಈ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದ ಶ್ರೀಕಾಂತ್ ಕೂಡಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ – ಈ ಕಾರ್ಡ್ ಇದ್ರೆ ಏನು ಸಿಗುತ್ತೆ?
Advertisement
ವಂಚನೆ ಪ್ರಕರಣದ ಎ1 ಚೈತ್ರಾ ಹಾಗೂ ಎ7 ಆರೋಪಿಗೆ 4ನೇ ತಾರೀಖಿನಂದು ಮೂರನೇ ಎಸಿಎಂಎಂ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿಗಳು ನ್ಯಾಯಾಲಯ ವಿಧಿಸಿದ್ದ ಷರತ್ತು ಪ್ರಕ್ರಿಯೆ ಪೂರ್ಣಗೊಳಿಸಲು ತಡವಾಗಿದ್ದರಿಂದ ಜಾಮೀನು ಮಂಜೂರಾಗಿ ಎರಡು ದಿನದ ಬಳಿಕ ಚೈತ್ರಾ ಹಾಗೂ ಶ್ರೀಕಾಂತ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಇದನ್ನೂ ಓದಿ: POK ನಮ್ಮದೇ, 24 ಅಸೆಂಬ್ಲಿ ಸೀಟ್‌ಗಳನ್ನು ಮೀಸಲಿಟ್ಟಿದ್ದೇವೆ: ಅಮಿತ್ ಶಾ
Advertisement
Advertisement
ಚೈತ್ರಾ ಸೇರಿದಂತೆ 7 ಆರೋಪಿಗಳಿಗೆ ಸೆ.23 ರಂದು ಮೂರನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತ್ತು. ಇದನ್ನೂ ಓದಿ: ಈ ದೇಶದ ಸಂಪತ್ತು ಭಾರತಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ: ಸಿಎಂಗೆ ಸಿ.ಟಿ.ರವಿ ಟಾಂಗ್
Advertisement
ಏನಿದು ಪ್ರಕರಣ?
ಚೈತ್ರಾ ಅವರು ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು (Govinda Babu Poojari) ಚೈತ್ರಾ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ಬೆಂಗಳೂರಿಗೆ ಬಂದಾಗ ಚೈತ್ರಾ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಹೇಳಿ ನಂಬಿಕೆ ಹುಟ್ಟಿಸಿದ್ದರು. ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಮೇಲೆ ಅಷ್ಟೊಂದು ದ್ವೇಷವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ
ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಒಟ್ಟು 5 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ಮರಳಿ ನೀಡುವಂತೆ ಕೇಳಿದ್ದಾರೆ. ಆದರೆ ಚೈತ್ರಾ ಹಣ ನೀಡಿರಲಿಲ್ಲ. ಹಣ ನೀಡದ ಕಾರಣ ಗೋವಿಂದಬಾಬು ದೂರಿನ ಆಧಾರದ ಮೇಲೆ ಸಿಸಿಬಿ (CCB) ಪೊಲೀಸರು ಚೈತ್ರಾ ಮತ್ತು ಅವರ ಸ್ನೇಹಿತರನ್ನು ಬಂಧಿಸಿದ್ದರು. ಇದನ್ನೂ ಓದಿ: ಬೆಳಗ್ಗೆಯಿಂದ ಟೇಕಾಫ್ ಆಗದ ವಿಮಾನ- ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಪರದಾಟ