ಮಂಡ್ಯ: ಸಕ್ಕರೆ ನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ (Flower Show) ಹಾಗೂ ಮಧುರ ವಸ್ತ್ರೋತ್ಸವಕ್ಕೆ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಹೂಗಳಿಂದ ಹಲವಾರು ಕಲಾಕೃತಿಗಳು ಅರಳಿ ನಿಂತಿದ್ದು, ಜನರನ್ನು ಕೈಬೀಸಿ ಕರೆಯುತ್ತಿದೆ. ಆಕರ್ಷಕ ಸೆಲ್ಫಿ ಪಾಯಿಂಟ್‌ಗಳಲ್ಲಿ ಪುಷ್ಪ ಪ್ರಿಯರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಮತ್ತೊಂದೆಡೆ 9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ಕಣ್ಮನ ಸೆಳೆಯುತ್ತಿದೆ.
Advertisement
Advertisement
ಮತ್ತೊಂದು ಬದಿಯಲ್ಲಿ ವಿವಿಧ ತರಕಾರಿ ಬೆಳೆಗಳು, ಕೈತೋಟ ಆಹಾರ ಬೆಳೆಗಳು ಮತ್ತು ತರಕಾರಿ ಬೆಳೆಗಳು ಹಾಗೂ ವಿವಿಧ ಅಭಿವೃದ್ಧಿ ಇಲಾಖೆ ಕಾರ್ಯಕ್ರಮಗಳ ಸಮಗ್ರ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತಿದೆ. ಇದನ್ನೂ ಓದಿ: ಅಮೆರಿಕದ ಇತಿಹಾಸದಲ್ಲೇ ಬೃಹತ್ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್, ನೂರಾರು ಮಂದಿ ಗಡಿಪಾರು
Advertisement
ಪ್ರತಿ ದಿನ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆ ವರೆಗೆ ಪ್ರವೇಶ
5 ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30 ರೂ. ಟಿಕೆಟ್ ದರ ಇರಲಿದ್ದು, 6-12 ವರ್ಷದ ಮಕ್ಕಳಿಗೆ 20 ರೂ. ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ.
Advertisement
ಪ್ರಮುಖ ಆಕರ್ಷಣೆಗಳಿವು:
ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಬಣ್ಣದ 9 ಲಕ್ಷ ಸೇವಂತಿಗೆ ಹೂವು, ಬಗೆ ಬಗೆಯ ಬಣ್ಣದ ಗುಲಾಬಿ ಬಳಸಿ ಪ್ರಸಿದ್ಧ ದೇವಾಲಯ ಹಾಗೂ ಪ್ರವಾಸಿ ತಾಣಗಳನ್ನು ನಿರ್ಮಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ. ಇದರೊಂದಿಗೆ ಯುವ ಜನತೆಯನ್ನು ಸೆಳೆಯಲು ಹತ್ತು ಸ್ಥಳಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥ ಚಿತ್ರ, ಆಕರ್ಷಕ ಅಡಿನಿಯಂ ಗಿಡಗಳು, ಬೋನ್ಸಾಯ್ ಗಿಡಗಳು, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳನ್ನ ಕೆತ್ತನೆ ಮಾಡಲಾಗಿದೆ.
ವಿಶೇಷ ಆಕರ್ಷಣೆಗಳಿವು:
40 ಬಗೆಯ ವಿವಿಧ ಜಾತಿಯ ಹೂವುಗಳ ಅಲಂಕಾರಿಕ ಕುಂಡಗಳ ಜೋಡಣೆ, 1.50 ಲಕ್ಷ ವಿವಿಧ ಜಾತಿಯ ಅಲಂಕಾರಿಕ ಗಿಡಗಳಾದ ಪೆಟೊನಿಯಾ, ಸಾಲ್ವಿಯಾ, ಅಂಟಿರೈನಂ, ಸೆಲೋಶಿಯಾ, ಮಾರಿಗೋಲ್ಡ್, ಜೀನಿಯಾ, ಸೇವಂತಿಗೆ, ಪಾಯ್ನಿಸೆಟಿಯಾಗಳು ಗಮನ ಸೆಳೆಯುತ್ತಿವೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಸ್ಟ್ರಾಂಗ್ ಇದೆ, ಆದಷ್ಟು ಬೇಗ ಬಿಜೆಪಿ ಕಿತ್ತಾಟಕ್ಕೆ ಅಂತ್ಯ: ಮುರುಗೇಶ್ ನಿರಾಣಿ
ವಿವಿಧ ಜಿಲ್ಲೆಗಳ ಕೈಮಗ್ಗ, ನೇಕಾರರ ಸಹಕಾರ ಸಂಘಗಳು ಭಾಗವಹಿಸಿದ್ದು, ಕೈಮಗ್ಗ ನೇಕಾರರಿಂದ ತಯಾರಿಸಿರುವ ಹತ್ತಿ, ರೇಷ್ಮೆ, ಮೊಳಕಾಲ್ಮೂರು ರೇಷ್ಮೆ ಸೀರೆ, ಚಿಂತಾಮಣಿ ರೇಷ್ಮೆ ಸೀರೆ, ಕಾಟನ್ ಸೀರೆ, ಪಂಚೆ, ಬೆಡ್‌ಶೀಟ್, ಟವಲ್, ಲುಂಗಿ ಹಾಗೂ ಇತರೆ ಕೈ ಮಗ್ಗ ಉತ್ಪನ್ನಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಇಂಗ್ಲಿಷ್ ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಮಕ್ಕಳು – ಸಕಲೇಶಪುರದಲ್ಲಿ ನಾಪತ್ತೆಯಾದವರು ಬೆಂಗಳೂರಲ್ಲಿ ಪತ್ತೆ
ಅಲ್ಲದೇ ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳನ್ನು ಹಾಗೂ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗುತ್ತಿದೆ.