ಬೆಂಗಳೂರು: ಇಂದು ಸೇರಿದಂತೆ ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದು ಹಲವು ಕಡೆ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದರೆ ಬೆಂಗಳೂರಿನಲ್ಲಿ (Bengaluru) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಎಡಿಜಿಪಿ ಅಲೋಕ್ ಕುಮಾರ್‌ಗೆ ಮುಂಬಡ್ತಿ ನೀಡದೇ 6 ವರ್ಷದ ಹಳೆ ಕೇಸ್ ಕೆದಕಿದ ಸರ್ಕಾರ
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಇದನ್ನೂ ಓದಿ: ಜೈಶಂಕರ್ ಕರೆ ಬೆನ್ನಲ್ಲೇ ತಾಲಿಬಾನ್ ವಿದೇಶಾಂಗ ಸಚಿವರನ್ನೇ ಬೀಜಿಂಗ್‌ಗೆ ಕರೆಸಿ ಪಾಕ್ ಜೊತೆ ಕೈ ಕುಲುಕಿಸಿದ ಚೀನಾ!
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40 – 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.