ಲಕ್ನೋ: ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್‌ನಲ್ಲಿ ಇಂದು ನಸುಕಿನ 2.15ರ ಸುಮಾರಿಗೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ನನ್ನ ಲೆವಲ್‍ಗೆ ಮಾತನಾಡೋರು ಇದ್ರೆ ನಾನು ಮಾತಾಡ್ತೇನೆ- ಜಮೀರ್‌ಗೆ ಡಿಕೆಶಿ ಟಾಂಗ್
Advertisement
Advertisement
ಕನ್ವರ್ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್‌ಗೆ ಹೋಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು. ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ – ಟಿಎಂಸಿ ಸಚಿವ ಪಾರ್ಥ ಚಟರ್ಜಿ ಅರೆಸ್ಟ್
Advertisement
Advertisement
ಕನ್ವರ್ ಯಾತ್ರೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನ ಶಾಲೆಗಳು ಹಾಗೂ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಜುಲೈ 25 ಮತ್ತು 26ರಂದು ಬಂದ್ ಮಾಡಲಾಗುವುದು. ಈಗಾಗಲೇ ಕನ್ವರ್ ಯಾತ್ರೆಯಿಂದಾಗಿ ಉತ್ತರಾಖಂಡದ ಹರಿದ್ವಾರ ಮತ್ತು ಉತ್ತರಪ್ರದೇಶದ ಮೀರತ್‌ನಲ್ಲಿಯೂ ಶಾಲೆಗಳನ್ನು ಮುಚ್ಚಲಾಗಿದೆ. ಯಾತ್ರಿಕರು ಈ ಪ್ರದೇಶಗಳಲ್ಲಿ ಹಾದು ಹೋಗುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ತಡೆಯಲು ಎರಡೂ ದಿನ ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವುದಿಲ್ಲ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.