ಗಾಂಧೀನಗರ: ಗುಜರಾತ್‍ನ ಸೂರತ್ ಜಿಲ್ಲೆಯ ಕಾರ್ಖಾನೆಯೊಂದರ ಬಳಿ ನಿಲ್ಲಿಸಿದ್ದ ರಾಸಾಯನಿಕ ಟ್ಯಾಂಕರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಕಾರ್ಖಾನೆಯ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವೇಳೆ ಸಚಿನ್ ಜಿಐಡಿಸಿನ ರಸ್ತೆ ಕೈಗಾರಿಕಾ ಪ್ರದೇಶದಲ್ಲಿರುವ ಡೈಯಿಂಗ್ ಫ್ಯಾಕ್ಟರಿಯೊಳಗೆ ಕಾರ್ಮಿಕರಿದ್ದರು ಎಂದು ಸೂರತ್ ಮುನ್ಸಿಪಲ್ ಕಾರ್ಪೊರೇಶನ್‍ನ ಉಸ್ತುವಾರಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ತಿಳಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ
Advertisement
Gujarat: Six people died and 20 others were admitted to the civil hospital after gas leakage at a company in Sachin GIDC area of Surat early morning today, says hospital’s In Charge Superintendent, Dr Omkar Chaudhary pic.twitter.com/HVnH9CZHYl
— ANI (@ANI) January 6, 2022
Advertisement
ಮುಂಜಾನೆ 4.25 ರ ಸುಮಾರಿಗೆ ಈ ಘಟನೆ ಕುರಿತಂತೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದ್ದು, ಕಾರ್ಖಾನೆಯ ರಸ್ತೆ ಬದಿ ನಿಲ್ಲಿಸಿದ್ದ ರಾಸಾಯನಿಕ ಟ್ಯಾಂಕರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ. ಈ ವೇಳೆ ಟ್ಯಾಂಕರ್‌ನಿಂದ 10 ಮೀಟರ್ ದೂರದಲ್ಲಿ ಮಲಗಿದ್ದ ಹಲವಾರು ಕಾರ್ಮಿಕರಿಗೆ ಉಸಿರುಕಟ್ಟಿದ ಪರಿಣಾಮ 25 ರಿಂದ 26 ಕಾರ್ಮಿಕರು ಪ್ರಜ್ಞಾಹೀನರಾಗಿದ್ದಾರೆ. ಸದ್ಯ ಎಲ್ಲರನ್ನು ನ್ಯೂ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿಯೂ 8 ಮಂದಿಯ ಸ್ಥಿತಿ ಗಂಭೀರವಾಗಿದೆ ಮತ್ತು ಐವರು ಮಂದಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!