ಕೋಲ್ಕತ್ತಾ: ಗೂಡ್ಸ್ ರೈಲೊಂದು (Goods Train) ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಡಾರ್ಜಿಲಿಂಗ್ (Darjeeling) ಜಿಲ್ಲೆಯಲ್ಲಿ ನಡೆದಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjungha Express) ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕೊಲ್ಲುವಾಗ ಸರ್ಕಾರ ಏನು ಮಾಡ್ತಿತ್ತು?: ಗೋವಿಂದ ಕಾರಜೋಳ
ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಜಾಡಲು ಹೋಗಿ ಬಳ್ಳೂರು ಕೆರೆಯಲ್ಲಿ ಮೃತಪಟ್ಟ ವಿದ್ಯಾರ್ಥಿಯ ಶವ ಪತ್ತೆ