ಡೆಹ್ರಾಡೂನ್: ಗಂಗಾ ನದಿಯ ಮೂಲ ತೊರೆಗಳಲ್ಲಿ ಒಂದಾದ ಗಂಗೋತ್ರಿ ಕಡೆಗೆ ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡು (Private Chopper Crash) ಐವರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ (Uttarakhand) ಉತ್ತರಕಾಶಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು, ಸೇನಾ ಸಿಬ್ಬಂದಿ, ವಿಪತ್ತು ನಿರ್ವಹಣಾ QRT ತಂಡ, 108 ಆಂಬ್ಯುಲೆನ್ಸ್, ಭಟ್ವಾರಿಯ ಬಿಡಿಒ, ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: ಉಗ್ರರು ಅಮಾಯಕರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಆಗಲ್ಲ – ಆಪರೇಷನ್ ಸಿಂಧೂರ ಬೆಂಬಲಿಸಿದ ಇಸ್ರೇಲ್
ಪ್ರಾಥಮಿಕ ವರದಿಗಳ ಪ್ರಕಾರ, ಖಾಸಗಿ ಹೆಲಿಕಾಪ್ಟರ್‌ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಗಾಯಗೊಂಡಿದ್ದು, ಉಳಿದವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ (Hospital) ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಗರ್ವಾಲ್ ವಿಭಾಗೀಯ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾದಿಂದ ಸಶಸ್ತ್ರ ಪಡೆ ಸಿಬ್ಬಂದಿಗೆ ಟಿಕೆಟ್ ಉಚಿತ ಮರುಹೊಂದಿಕೆ ಆಫರ್