ಚಂಡೀಗಢ: ಕುಟುಂಬಸ್ಥರೆಲ್ಲರೂ ಸೇರಿ ಕಾರ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಾರ್, ಟ್ರಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ನಾಲ್ವರು ಹಾಗೂ ಟ್ರ್ಯಾಕ್ಟರ್ನಲ್ಲಿದ್ದ ಕಾರ್ಮಿರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಡೆದಿದೆ.
ಥರದ್ ಧನೇರಾ ಹೆದ್ದಾರಿಯ ಪಾವದಾಸನ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರಲ್ಲಿ 4 ಮಂದಿ ಭಖ್ಡಿಯಾಲ್ ಮತ್ತು ಒಬ್ಬ ಜಡಿಯಾಲಿ ಗ್ರಾಮದವ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಗುವಿನ ಎದೆಗೂಡಿನ ಪಕ್ಕದಲ್ಲಿದ್ದ ಎಲುಬಿನ ಬಾಲ ತೆಗೆದುಹಾಕಿದ ವೈದ್ಯರು
ಗಾಯಾಳುಗಳನ್ನು ಚಿಕಿತ್ಸೆಗಾಗಿ ಧನೇರಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ಘಟನೆ ಬಗ್ಗೆ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ. ಅಪಘಾತದ ಕುರಿತು ಧನೇರಾ ವೆತ್ರದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್