ಮುಂಬೈ: ನಾಗ್ಪುರ ಬಳಿ ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ (ಇಂದು) ಬೆಳಗ್ಗೆ ಭಾರೀ ಸ್ಫೋಟ (Ordnance Factory Explosion) ಸಂಭವಿಸಿದ್ದು, 5ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಹಾರಾಷ್ಟ್ರದ (Maharashtra) ನಾಗ್ಬುರ ಬಳಿಯಿರುವ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಐವರು ಸಾವನ್ನಪ್ಪಿರುವ ಶಂಕೆಯಿದೆ. ಸದ್ಯ ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ನಡೆಸುತ್ತಿವೆ. ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಗೊಂಡವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್ ಮಾಡಿದ್ದ ಭೂಪ!
ಸ್ಫೋಟದ ಸಮಯದಲ್ಲಿ ಛಾವಣಿ ಕುಸಿದಿದ್ದು ಅದರ ಅಡಿಯಲ್ಲಿ 12 ಮಂದಿ ಸಿಲುಕಿದ್ದರು, ಅವರಲ್ಲಿ ಇಬ್ಬರನ್ನು ಮಾತ್ರ ರಕ್ಷಿಸಲಾಗಿದೆ. ಉಳಿದವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕ್ಲಾಸ್ ನಡೆಯುತ್ತಿದ್ದಾಗಲೇ ತರಗತಿಯಿಂದ ಹೊರಬಂದು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಇನ್ನೂ ಸ್ಫೋಟದ ಶಬ್ಧ 5 ಕಿಮೀ ವರೆಗೆ ಕೇಳಿಸಿದೆ. ಸ್ಥಳದಲ್ಲಿ ದಟ್ಟ ಹೊಗೆ ಮುಗಿಲೆತ್ತರಕ್ಕೆ ವ್ಯಾಪಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಇನ್ಮುಂದೆ ಹಣ ಇಲ್ಲದಿದ್ರೂ ಟಿಕೆಟ್ ಬುಕ್ ಮಾಡಬಹುದು!