ಮಳೆಯ ಅವಾಂತರ – 5 ಮನೆಗಳು ಕುಸಿದು ಕಾರುಗಳು ಸಂಪೂರ್ಣ ಜಖಂ

Public TV
1 Min Read
rain

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಸೋಮವಾರ ಭಾರೀ ಮಳೆ (Rain) ಸುರಿದ ಪರಿಣಾಮ ಪಿಎಸ್ ಕಾಲೇಜ್ ಬಳಿಯ ವೀರಭದ್ರನಗರದ ಸ್ಲಮ್‌ನಲ್ಲಿ 5 ಮನೆಗಳು ಮತ್ತು ಕಾಂಪೌಂಡ್ ಗೋಡೆ ಕುಸಿದು ಪಕ್ಕದ ಅಪಾರ್ಟ್ಮೆಂಟ್‌ನಲ್ಲಿ (Apartment) ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದೆ.

ರಿಂಗ್ ರೋಡ್‌ನ ವೀರಭದ್ರೇಶ್ವರ ನಗರದಲ್ಲಿ (Veerabhadreshwara Nagar) ಈ ಘಟನೆ ನಡೆದಿದ್ದು, ವಸುಂಧರಾ ಕೃತಿಕಾ ಅಪಾರ್ಟ್ಮೆಂಟ್‌ನ ತಡೆಗೋಡೆ ಸಮೇತ ಮನೆ ಸಂಪೂರ್ಣ ನೆಲಸಮವಾಗಿದೆ. ಅಲ್ಲದೇ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಮತ್ತೆರಡು ಕಾರಗಳಿಗೂ ಸಹ ಹಾನಿಯಾಗಿದೆ.  ಇದನ್ನೂ ಓದಿ: ನಿಮ್ಮ ಮತಗಟ್ಟೆ ಯಾವುದು? – ಮೊಬೈಲ್‌ನಲ್ಲೇ ಚೆಕ್‌ ಮಾಡಿ

ಗೋಪಾಲ್ ಎಂಬುವವರ ಮನೆ ಸಂಪೂರ್ಣ ಕುಸಿದು ಹಾನಿಯಾಗಿದ್ದು, ಮನೆಯಲ್ಲಿದ್ದ ವಸ್ತುಗಳು ನೆಲಸಮಗೊಂಡಿವೆ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ್ದರಿಂದ ಯಾವುದೇ ಸಾವು-ನೋವು ಸಂಭವಿಸಿಲ್ಲ. ಘಟನೆಯಲ್ಲಿ ಯಾರಿಗೂ ಸಹ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: SSLC Result – 4 ವಿದ್ಯಾರ್ಥಿಗಳಿಗೆ 625ಕ್ಕೆ 625

 

Share This Article