ದಿಸ್ಪುರ: ಅಸ್ಸಾಂನ (Assam) ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಶನಿವಾರ ಭಾರತೀಯ ವಾಯುಪಡೆಯ (IAF) ಎಎನ್ -32 ಸಾರಿಗೆ ವಿಮಾನ ಪತನವಾಗಿದ್ದು (AN-32 Transport Aircraft), ಐವರು ವಾಯುಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಹ ಪೈಲಟ್ ಗಾಯಗೊಂಡಿದ್ದಾರೆ.
ಸ್ಕ್ವಾಡ್ರನ್ ಲೀಡರ್ ಪ್ರಶಾಂತ್ ಸಿಂಗ್, ಫ್ಲೈಟ್ ಲೆಫ್ಟಿನೆಂಟ್ ಶುಭಮ್ ಕುಮಾರ್, ಸಾರ್ಜೆಂಟ್ ಜಿತೇಂದ್ರ ಶರ್ಮಾ, ಅಗ್ನಿವೀರ್ವಾಯು ಖೇಮರಾಮ್ ಕುಮಾವತ್ ಮತ್ತು ಅಗ್ನಿವೀರ್ವಾಯು ಡ್ಯಾನಿಶ್ ಆಲಂ ಮೃತರು ಎಂದು ಗುರುತಿಸಲಾಗಿದೆ. ಭಾರತೀಯ ವಾಯುಪಡೆ ಮೃತರಿಗೆ ಎಕ್ಸ್ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಅಸ್ಸಾಂನ ಜೋರ್ಹತ್‌ನಲ್ಲಿ ಭಾರತೀಯ ವಾಯುಪಡೆಯ AN-32 ಸಾರಿಗೆ ವಿಮಾನ ಪತನ
The Indian Air Force deeply regrets the loss of five personnel in the An-32 accident at Jorhat, Assam.
Sqn Ldr Prashant Singh, Flt Lt Shubham Kumar, Sgt Jitendra Sharma, Agniveervayu Khemaram Kumawat and Agniveervayu Danish Alam made the supreme sacrifice in the line of duty.… pic.twitter.com/9SmOjtS5mU
— Indian Air Force (@IAF_MCC) June 13, 2026
ಜೋರ್ಹತ್ ಜಿಲ್ಲೆಯ ರೌರಿಯಾ ಪ್ರದೇಶದಲ್ಲಿರುವ ಭಾರತೀಯ ವಾಯುಪಡೆಯ ವಾಯುನೆಲೆಯಲ್ಲಿ ಇಳಿಯುವಾಗ ಎಎನ್ -32 ವಿಮಾನ ಪತನಗೊಂಡಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಐಎಎಫ್ ಘಟನೆಯನ್ನು ಖಚಿತಪಡಿಸಿದ್ದು, ಸಂಪೂರ್ಣ ಪರಿಶೀಲನೆ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಕೇರಳ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಬಂಧನ
