ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 10 ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿದ್ದೂ ಕೆಂಪು ಕೋಟೆ (Red Fort) ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಬಾಂಗ್ಲಾದೇಶದ ಐವರು ಅಕ್ರಮ ವಲಸಿಗರನ್ನ ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.
ಹೌದು. ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ. ಇದನ್ನೂ ಓದಿ: ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ
20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ. ಇದನ್ನೂ ಓದಿ: ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕ – ಭಾರತ ಕೌಂಟರ್‌ಗೆ ಟ್ರಂಪ್ ಬಿಗ್ ವಾರ್ನಿಂಗ್
ಈ ಕುರಿತು ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ (ಉತ್ತರ ಜಿಲ್ಲೆ) ರಾಜ ಬಂಥಿಯಾ, ಇವರೆಲ್ಲರೂ ಅಕ್ರಮ ವಲಸಿಗರಾಗಿದ್ದು, ಅಕ್ರಮವಾಗಿ ಕೆಂಪು ಕೋಟೆ ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದರು. ಹೀಗಾಗಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಅವರು ಸುಮಾರು 3-4 ತಿಂಗಳ ಹಿಂದೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ದೆಹಲಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಸಾರಿಗೆ ಮುಷ್ಕರ | ಇದು ಪಾಪರ್ ಸರ್ಕಾರ, ಪರಿಹಾರ ಕೊಡದಿದ್ರೆ ಅಧಿಕಾರ ಬಿಟ್ಟು ತೊಲಗಿ – ಅಶೋಕ್ ವಾಗ್ದಾಳಿ