ನ್ಯೂಯಾರ್ಕ್: ಲಾಸ್ ವೇಗಾಸ್ನಲ್ಲಿರುವ (Las Vegas) ಅಪಾರ್ಟ್ ಮೆಂಟ್ಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಐವರು ಸಾವನ್ನಪ್ಪಿ, 13 ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಗುಂಡಿನ ದಾಳಿ ನಡೆಸಿದ ಶಂಕಿತನನ್ನು ಎರಿಕ್ ಆಡಮ್ಸ್ (47) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಈತನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಟೋಬರ್ನಿಂದ 4 ತಿಂಗಳು ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ
Advertisement
Advertisement
ಎರಿಕ್ ಆಡಮ್ಸ್ ಸೋಮವಾರ ತಡರಾತ್ರಿ ಅದೇ ಸಂಕೀರ್ಣದಲ್ಲಿರುವ ಎರಡು ನಾರ್ತ್ ಲಾಸ್ ವೇಗಾಸ್ ಅಪಾರ್ಟ್ಮೆಂಟ್ಗಳಲ್ಲಿ ನಾಲ್ವರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಶಂಕಿಸಲಾಗಿದೆ. ಶಂಕಿತ ನ ಸುಳಿವಿನ ಮೇರೆಗೆ ಪೊಲೀಸರು ಆತನನ್ನು ಬಂಧಿಸಲು ತೆರಳಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಸದ್ಯ ಈ ಘಟನೆಯ ಹಿಂದಿರುವ ಉದ್ದೇಶ ಏನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.