– ಐದು ಮಂದಿ ಗಂಭೀರ
ಮುಂಬೈ: ನಾಗ್ಪುರದ (Nagpur) ಧಮ್ನಾದಲ್ಲಿರುವ ಸ್ಫೋಟಕ ತಯಾರಿಕ ಕಾರ್ಖಾನೆಯಲ್ಲಿ (Explosives Manufacturing Unit) ಸ್ಫೋಟ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 4 ಮಹಿಳೆಯರು ಸೇರಿದಂತೆ 5 ಮಂದಿ ಮೃತಪಟ್ಟಿದ್ದಾರೆ. ತನಿಖೆ ನಡೆಯುತ್ತಿದೆ. ನಮ್ಮ ತಂಡ, ಕ್ರೈಂ ಬ್ರಾಂಚ್ ಮತ್ತು ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ರವೀಂದರ್ ಸಿಂಘಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಗೆ ಶಾಮಿಯಾನ, ಮಾಧ್ಯಮ ನಿರ್ಬಂಧ ಖಂಡನೀಯ: ಮಾಜಿ ಶಾಸಕ ಪಿ.ರಾಜೀವ್
ವರದಿಯ ಪ್ರಕಾರ, ನಗರದಿಂದ ಸುಮಾರು 25 ಕಿಮೀ ದೂರದಲ್ಲಿರುವ ಹಿಂಗ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಧಮ್ನಾ ಗ್ರಾಮದ ಚಾಮುಂಡಿ ಎಕ್ಸ್ಪ್ಲೋಸಿವ್ ಪ್ರೈವೆಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಕಾರ್ಮಿಕರು ಸ್ಫೋಟಕಗಳನ್ನು ಪ್ಯಾಕ್ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಕಾರ್ಮಿಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ – ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೋದಿ
ಸ್ಫೋಟದ ಬಳಿಕ ಘಟಕದ ವ್ಯವಸ್ಥಾಪಕ ಮತ್ತು ಮಾಲೀಕರು ತಲೆಮರೆಸಿಕೊಂಡಿದ್ದಾರೆ ಎಂದು ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ಹೇಳಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬಕ್ರೀದ್ ಹಬ್ಬಕ್ಕೆ ಗೋವುಗಳು ಕುರ್ಬಾನಿಯಾಗದಂತೆ ಕ್ರಮ ವಹಿಸಿ – ಬಜರಂಗದಳ ಆಗ್ರಹ