ಶ್ರೀಕಾಕುಳಂನ ರೈಲು ಅಪಘಾತಕ್ಕೆ ಐವರು ಬಲಿ

Public TV
1 Min Read
TRAIN 2

ಅಮರಾವತಿ: ಆಂಧ್ರಪ್ರದೇಶದಲ್ಲಿ ಕೊನಾರ್ಕ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಸೋಮವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಕೊಯಮತ್ತೂರು- ಸಿಲ್ಚಾರ್ ಎಕ್ಸ್‍ಪ್ರೆಸ್ ರೈಲಿನಿಂದ ಸಿಗಡಮ್ -ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ-ಮುಂಬೈ ಕೊನಾರ್ಕ್ ರೈಲು, ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

train tracker

ಐವರ ಮೃತದೇಹಗಳ ಗುರುತು ಪತ್ತೆ ಮಾಡಲಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿ ಶ್ರೀಕಾಕುಳಂ ಜಿ. ಆರ್ ರಾಧಿಕಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಠಾಣೆಯಲ್ಲೇ ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್‌ ಸಾವು

TRAIN 1

ವಿಶಾಖಪಟ್ಟಣ-ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Share This Article