ಲಕ್ನೋ: ಟ್ರಾನ್ಸ್ಪೋರ್ಟ್ ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 24 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳುತ್ತಿದ್ದು, ಮೂರನೇ ಮಹಡಿಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಸಾದಕ್ಕೆ ಪರವಾನಗಿ; ರಾಜ್ಯ ಸರ್ಕಾರದ್ದು ಹುಚ್ಚು ಆದೇಶ – ಪ್ರಲ್ಹಾದ್ ಜೋಶಿ ಆಕ್ರೋಶ
ಕಟ್ಟಡದ ಅವಶೇಷಗಳಲ್ಲಿ ಹುದುಗಿಕೊಂಡಿರುವವರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‌ಡಿಆರ್‌ಎಫ್) ರಕ್ಷಣಾ ಪಡೆಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಮಿಷನರ್ ಜಿ.ಎಸ್ ನವೀನ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: IAS ಸೇವೆಯಿಂದಲೇ ಪೂಜಾ ಖೇಡ್ಕರ್ ವಜಾ – ಕೇಂದ್ರ ಸರ್ಕಾರ ಆದೇಶ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ನೋವಿನಿಂದ ಕೂಡಿದೆ. ಲಕ್ನೋದ ಮ್ಯಾಜಿಸ್ಟ್ರೇಟ್ ಜೊತೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಕರೆ ಮಾಡಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡಿದ್ದೇನೆ ಎಂದರು. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಾಗುವ ಎಲ್ಲಾ ಸಹಾಯವನ್ನು ಮಾಡುತ್ತಿದೆ ಎಂದರು. ಇದನ್ನೂ ಓದಿ: ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿ