ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಸುರಿಯುತ್ತಿರುವ ಭಾರೀ ಮಳೆಯಿಂದ (Rain) ಭೂಕುಸಿತ (Jammu And Kashmir) ಮತ್ತು ಪ್ರವಾಹದಿಂದಾಗಿ (Flood) ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಭಾಗಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತ ಸಂಭವಿಸಿದೆ. ಅಲ್ಲದೇ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರ ನಡುವೆ ಜನರ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ
- Advertisement -
- Advertisement -
ಭೂಕುಸಿತದವಾದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಜೀವಗಳನ್ನು ಉಳಿಸುವುದು ನಮ್ಮ ಆದ್ಯತೆಯಾಗಿದೆ. ಈ ಭಾಗದಲ್ಲಿ ಆದ ನಷ್ಟದ ಬಗ್ಗೆ ನಾವು ಸೂಕ್ತ ನಿರ್ಣಯ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- Advertisement -
- Advertisement -
ಪ್ರವಾಹದಿಂದ ಕುಪ್ವಾರಾ ಜಿಲ್ಲೆಯಲ್ಲಿ ಶುಮ್ರಿಯಾಲ್ ಸೇತುವೆ, ಖುಮ್ರಿಯಾಲ್ ಸೇತುವೆ, ಶತ್ಮುಕಮ್ ಸೇತುವೆ, ಸೋಹಿಪೋರಾ-ಹಯ್ಹಮಾ ಸೇತುವೆ, ಫಕ್ರ್ಯಾನ್ ಸೇತುವೆ, ಕುಪ್ವಾರದಲ್ಲಿರುವ ಎರಡು ಗ್ರಾಮೀಣಾಭಿವೃದ್ಧಿ ಇಲಾಖೆ ಕಟ್ಟಡಗಳು ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳು ಹಾಗೂ ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 7 ಮಂದಿ ನಕ್ಸಲರ ಹತ್ಯೆ