ಹಾವೇರಿ: ಕಾಂಗ್ರೆಸ್ (Congress) ಪಕ್ಷ ಬೆಳಗಾವಿಯಲ್ಲಿ ಆಯೋಜನೆ ಮಾಡಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಯಿತು.
ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬ ಕಾರ್ಯಕರ್ತ ಸಮಾವೇಶದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದನ್ನೂ ಓದಿ: ಮ್ಯಾರಥಾನ್‌ನಲ್ಲಿ ಕುಸಿದು ಬಿದ್ದ ವ್ಯಕ್ತಿ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಶಾಸಕ ಸತೀಶ್ ಸೈಲ್
Advertisement
Advertisement
ಮೃತರ ಕುಟುಂಬಸ್ಥರು ಪರಿಹಾರ ನೀಡುವಂತೆ ಶಾಸಕ ಪ್ರಕಾಶ್ ಕೋಳಿವಾಡಗೆ ಮನವಿ ಮಾಡಿದ್ದರು. ಶಾಸಕ ಪ್ರಕಾಶ್ ಕೋಳಿವಾಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದು 5 ಲಕ್ಷ ರೂ. ಪರಿಹಾರ ನೀಡುವಲ್ಲಿ ಯಶಸ್ವಿಯಾಗಿದರು. ಇದನ್ನೂ ಓದಿ: ಚಾಮರಾಜನಗರ| ಊರೊಳಗೆ ನುಗ್ಗಿದ ಚಿರತೆಗೆ ಕರು ಬಲಿ – ಜನರಲ್ಲಿ ಆತಂಕ
Advertisement
Advertisement
ಭಾನುವಾರ ಶಾಸಕ ಪ್ರಕಾಶ್ ಕೋಳಿವಾಡ ಮೃತರ ಕುಟುಂಬಕ್ಕೆ ಚೆಕ್ ವಿತರಿಸಿದರು. ಇದನ್ನೂ ಓದಿ: 3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್‌ಆರ್‌ಟಿಸಿ