Recent News

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸೋಮವಾರ ತಡರಾತ್ರಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಕೆಎಸ್‍ಆರ್‍ಟಿಸಿ ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ, ಒಂದು ಬಾಲಕಿ ದಾರುಣ ಸಾವನ್ನಪ್ಪಿದ್ದಾರೆ.

ಇನ್ನೂ ಧರ್ಮಸ್ಥಳದ ಮಂಜುನಾಥನ ದರ್ಶನ ಮುಗಿಸಿ ಹಾಸನ ಮಾರ್ಗವಾಗಿ ಬರುತ್ತಿದ್ದ ಕಾರು ಏಕಾಏಕಿ ಬಲ ಭಾಗದಿಂದ ಎಡಭಾಗಕ್ಕೆ ತಿರುಗಿಗೆ. ಈ ವೇಳೆ ಐರಾವತ ಬಸ್‍ಗೆ ಡಿಕ್ಕಿಯಾಗಿದೆ.

ಕಾರು ಸಂಪೂರ್ಣ ಜಖಂಗೊಂಡರೆ ಐರಾವತ ಬಸ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದ್ದ ಬಸ್ ನಿಲ್ದಾಣಕ್ಕೆ ನುಗ್ಗಿದೆ. ಬಸ್ ನಲ್ಲಿದ್ದ 35 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್‍ಪಿ ಸುಜಿತ್ ಹಾಗೂ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *