ಧಾರವಾಡ: ಶಂಕಿತ ಡೆಂಗ್ಯೂ ಜ್ವರದಿಂದ (Dengue fever) ಬಳಲುತ್ತಿದ್ದ 5 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.
ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಮಗುವನ್ನು ನಗರದ ಪೊಲೀಸ್ ಠಾಣೆಯ ಕಾನ್‍ಸ್ಟೇಬಲ್ ಆಗಿರುವ ಗೋಪಾಲ ಲಮಾಣಿ ಎಂಬವರ ಮಗಳು ಆರಾಧ್ಯ ಎಂದು ಗುರುತಿಸಲಾಗಿದೆ.
ಮಗು ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿತ್ತು. ಇದರಿಂದ ಮಗುವನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ
ಗೋಪಾಲ ಲಮಾಣಿಯವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡದವರಾಗಿದ್ದಾರೆ. ಈ ಹಿಂದೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಬಾಲಕಿಯೋರ್ವಳು ಶಂಕಿತ ಡೆಂಗ್ಯೂಗೆ ಬಲಿಯಾಗಿದ್ದಳು. ಇದನ್ನೂ ಓದಿ: Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ