ಲಕ್ನೋ: ಟ್ರ್ಯಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಉನ್ನೋ ನಗರದಲ್ಲಿ ನಡೆದಿದೆ.
ಈ ಅಪಘಾತ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ಮಾರ್ಗದಲ್ಲಿ ನಡೆದಿದ್ದು, ಬಿಹಾರ್‌ನ ವಿಷ್ಣು(10), ವಿನೋದ್ ಕುಮಾರ್ (7), ದುಖಿ ಲಾಲ್ ಮೆಹ್ತಾ ಮತ್ತು ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.
Advertisement
Unnao: 5 dead, more than 30 injured after a bus rammed into a tractor trolley on Lucknow-Agra expressway pic.twitter.com/hVznRr2XlM
— ANI UP/Uttarakhand (@ANINewsUP) May 18, 2019
Advertisement
ಖಾಸಗಿ ಬಸ್ ಪ್ರಯಾಣಿಕರನ್ನು ಕರೆದುಕೊಂಡು ದೆಹಲಿಯಿಂದ ಬಿಹಾರಕ್ಕೆ ಹೋಗುತ್ತಿತ್ತು. ಗುಂಡಿಗಳಿಂದ ತುಂಬಿದ್ದ ರಸ್ತೆಯಲ್ಲಿ ಬಸ್ ದೇವಖರಿ ಗ್ರಾಮದ ಬಳಿ ವೇಗವಾಗಿ ಚಲಿಸುತ್ತಿತ್ತು. ಅದೇ ರಸ್ತೆಯ ತಿರುವಿನಲ್ಲಿ ತರಬೂಜ್ ಹಣ್ಣುಗಳನ್ನು ತುಂಬಿಕೊಂಡು ಟ್ರ್ಯಾಕ್ಟರ್ ಟ್ರಾಲಿ ಕೆಟ್ಟು ನಿಂತಿತ್ತು. ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಆಗೋದನ್ನು ತಪ್ಪಿಸಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಟ್ರಾಲಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ.
Advertisement
ಡಿಕ್ಕಿಯ ರಭಸಕ್ಕೆ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೂ 30 ಮಂದಿಗೆ ಗಂಭೀರವಾಗಿ ಗಾಯವಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸ್ ಬಂದು ಗಾಯಾಳುಗಳನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಗರ್ಮೌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.