– ನದಿ ನೀರಿನ ಮಟ್ಟ ಏರಿಕೆಯಾಗಿ ಟ್ಯಾಂಕ್ ಸಮೇತ ಕೊಚ್ಚಿಹೋದ ಸೈನಿಕರು
ನವದೆಹಲಿ: ಲೇಹ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಎಲ್‌ಎಸಿ (LAC) ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪಘಾತದಲ್ಲಿ ಭಾರತೀಯ ಸೇನೆಯ (Indian Soldiers) ಐವರು ಯೋಧರು ಹುತಾತ್ಮರಾಗಿದ್ದಾರೆ.
ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಕಾರಿನಿಂದ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು
ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್ ಬಳಿ ಬೋಧಿ ನದಿಯನ್ನು ತಮ್ಮ T-72 ಟ್ಯಾಂಕ್ ಮೂಲಕ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಪ್ರಾರಂಭಿಸಿತು. ತಕ್ಷಣವೇ ಟ್ಯಾಂಕ್‌ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿ ಹೋದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ. ‘ಲಡಾಖ್‌ನಲ್ಲಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್‌ನಲ್ಲಿ ಸಚಿವರು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: UGC-NET 2024: ಹೊಸ ದಿನಾಂಕ ಪ್ರಕಟಿಸಿದ ಎನ್‌ಟಿಎ