ಚೆನ್ನೈ: ಭಾರತೀಯ ವಾಯುಪಡೆಯ (Indian Air Force) 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ (Chennai) ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವಾಗಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.
ವಾಯುಪಡೆ ಸಂಸ್ಥಾಪನಾ ದಿನ ನಿಮಿತ್ತ ದಕ್ಷಿಣ ಭಾರತದಲ್ಲಿ ನಡೆದ ಮೊದಲ ಏರ್ ಶೋ ಇದಾಗಿತ್ತು. ಚೆನ್ನೈನ ಮರೀನಾ ಬೀಚ್‌ನಲ್ಲಿ (Marina Beach) ಏರ್ ಶೋ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ 72 ವಿಮಾನಗಳು ವಿವಿಧ ಸಾಹಸಗಳನ್ನು ಪ್ರದರ್ಶಿಸಿದ್ದವು. 15 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಣೆಗೆ ಆಗಮಿಸಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ
ಏರ್ ಶೋ ವೀಕ್ಷಿಸಿ ವಾಪಾಸ್ ತೆರಳುವಾಗ ಬಿಸಿಲಿನ ತಾಪಕ್ಕೆ ಜನರ ನಡುವೆ ನೂಕು ನುಗ್ಗಲು ಸಂಭವಿಸಿದೆ. ಈ ವೇಳೆ ಉಸಿರಾಡಲಾಗದೇ 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. 100 ಕ್ಕೂ ಹೆಚ್ಚು ಜನರಿಗೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯ ರಸ್ತೆಯಲ್ಲಿ ವಾಹನ ಸಂದಣಿ ಹಾಗೂ ಜನಸಂದಣಿ ಏರ್ಪಟ್ಟಿತ್ತು. ಅಸ್ವಸ್ಥರಾದವರನ್ನ ಆಂಬ್ಯಲೆನ್ಸ್ಗೆ ಸಾಗಿಸಿವುದಕ್ಕೆ ಪರದಾಡಬೇಕಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣ ದಾಖಲು
ಮೃತರನ್ನು ಜಾನ್ (60), ತಿರುವೊಟ್ಟಿಯೂರು ಮೂಲದ ಕಾರ್ತಿಕೇಯನ್, ದಿನೇಶ್ ಕುಮಾರ್ (37), ಪೆರುಂಗಲತ್ತೂರಿನ ಶ್ರೀನಿವಾಸನ್, ಎಂದು ಗುರುತಿಸಲಾಗಿದೆ.
ಏರ್ ಶೋನಲ್ಲಿ 72 ವಿಮಾನಗಳು ಭಾಗಿ:
ವಾಯುಸೇನೆಯ ಈ ಪ್ರತಿಷ್ಠಿತ ಏರ್ ಶೋನಲ್ಲಿ ರಫೇಲ್ ಸೇರಿದಂತೆ 72 ವಿಮಾನಗಳು ಪಾಲ್ಗೊಂಡಿದ್ದವು. ಸ್ವದೇಶಿ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್, ಲಘು ಯುದ್ಧ ಹೆಲಿಕಾಪ್ಟರ್ ಪ್ರಚಂಡ್ ಮತ್ತು ಹೆರಿಟೇಜ್ ವಿಮಾನ ಡಕೋಟಾ ಕೂಡ ಏರ್ ಶೋನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದವು. ಈ ಏರ್ ಶೋ ವಿಶೇಷ ಗರುಡ ಫೋರ್ಸ್ ಕಮಾಂಡೋಗಳ ಸಿಮ್ಯುಲೇಟೆಡ್ ರಕ್ಷಣಾ ಕಾರ್ಯಾಚರಣೆಯಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಪ್ರದರ್ಶನವನ್ನು ಒಳಗೊಂಡಿತ್ತು. ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ