Connect with us

Latest

ಸಂಭ್ರಮಾಚರಿಸುವವರ ವಿರುದ್ಧ ಕೇಸ್, ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ – ಚುನಾವಣಾ ಆಯೋಗ ಖಡಕ್ ಸೂಚನೆ

Published

on

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆಗಲೇ ಸಂಭ್ರಮಾಚರಣೆ ಶುರುವಾಗಿದೆ. ಯಾವುದೇ ಪಕ್ಷದ ಅಭ್ಯರ್ಥಿ ಗೆದ್ದರೂ ಸಂಭ್ರಮಾಚರಣೆ ಮಾಡಕೂಡದರು, ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾ ಆಯೋಗ ತಿಳಿಸಿದೆ. ಆದರೂ ಹಲವೆಡೆ ಸಂಭ್ರಮಾಚರಣೆ ಮಾಡಲಾಗುತ್ತಿದ್ದು, ಹೀಗಾಗಿ ಅಂತಹವರ ವಿರುದ್ಧ ಮುಲಾಜಿಲ್ಲದೇ ಕೇಸ್ ದಾಖಲಿಸಿ ಎಂದು ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ನೀಡಿದೆ.

ಕೊರೊನಾ ನಿಯಮ ಉಲ್ಲಂಘೀಸುವವರ ವಿರುದ್ಧ ಮುಲಾಜಿಲ್ಲದೆ ಕೇಸ್ ದಾಖಲಿಸಿ ಎಂದು ಚುನಾವಣಾ ಆಯೋಗ ಎಲ್ಲ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶಿಸಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಂಭ್ರಮಾಚರಣೆ, ರ್ಯಾಲಿ, ರೋಡ್ ಶೋಗಳನ್ನು ನಡೆಸದಂತೆ ಚುನಾವಣಾ ಆಯೋಗ ಈಗಾಗಲೇ ನಿಷೇಧಿಸಿದೆ. ಆದರೂ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದು, ಫಲಿತಾಂಶದ ಬಳಿಕ ಗುಂಪಾಗಿ ಸೇರುವ ಪ್ರದೇಶದ ಪೊಲೀಸ್ ಠಾಣೆಯ ಇನ್‍ಚಾರ್ಜ್‍ಗಳನ್ನು ಸಸ್ಪೆಂಡ್ ಮಾಡುವಂತೆ ಹಾಗೂ ಕೇಸ್ ದಾಖಲಿಸುವಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದೆ.

ಚುನಾವಣಾ ಸಂಭ್ರಮಾಚರಣೆಗಳ ಕುರಿತು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಅಂತಹವರ ವಿರುದ್ಧ ಪ್ರಕರಣ ದಾಖಲಿಸುವಂತೆ 5 ರಾಜ್ಯಗಳ ಪ್ರಧಾನ ಕಾರ್ಯದಾರ್ಶಿಗಳಿಗೆ ಸೂಚಿಸಿದೆ. ಅಲ್ಲದೆ ಸಂಬಂಧಪಟ್ಟ ಎಸ್‍ಎಚ್‍ಒಗಳನ್ನು ಸಸ್ಪೆಂಡ್ ಮಾಡಿ, ಅಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಂಡ ಕುರಿತು ವರದಿ ಸಲ್ಲಿಸಿ ಎಂದು ಸೂಚಿಸಿದೆ.

ತಮ್ಮ ಪಕ್ಷಗಳು ಅಧಿಕಾರದ ಗದ್ದುಗೆ ಹಿಡಿಯಲಿವೆ ಎಂಬುದು ತಿಳಿಯುತ್ತಿದ್ದಂತೆ ಟಿಎಂಸಿ ಹಾಗೂ ಡಿಎಂಕೆ ಕಾರ್ಯಕರ್ತರು ಕೋಲ್ಕತ್ತಾ ಹಾಗೂ ಚೆನ್ನೈನಲ್ಲಿ ಸಂಭ್ರಮಾಚರಣೆ ಮಾಡುವುದರಲ್ಲಿ ತೊಡಗಿದ್ದಾರೆ.

Click to comment

Leave a Reply

Your email address will not be published. Required fields are marked *