ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ.
ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ಹಲವು ಹಂತಗಳಲ್ಲಿ ಚುನಾವಣೆ ಎದುರಿಸಿದ್ದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ, ಮಿಜೋರಾಂ ಜನಾದೇಶ ಏನೆಂಬ ಕುತೂಹಲಕ್ಕೆ ಬೆಳಗ್ಗೆ 10 ಗಂಟೆಯೊಳಗೆ ತೆರೆ ಬೀಳಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಈ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸತ್ವಪರೀಕ್ಷೆಯಾಗಿದೆ.
ಈಗಾಗಲೇ ಮತಗಟ್ಟೆ ಸಮೀಕ್ಷೆಗಳು ತುರುಸಿನ ಪೈಪೋಟಿ ಹಾಗೂ ಕಾಂಗ್ರೆಸ್ ಮುನ್ನಡೆ ಬಗ್ಗೆ ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv