– ಡಿ.3 ಕ್ಕೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ
ನವದೆಹಲಿ: ಮಿಜೋರಾಂ, ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಕೊನೆಗೂ ಚುನಾವಣಾ ದಿನಾಂಕ ಘೋಷಣೆಯಾಗಿದೆ. ನವೆಂಬರ್ 7 ರಿಂದ 30 ರ ವರೆಗೆ ಪಂಚ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Advertisement
ನವೆಂಬರ್ 7 ರಂದು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಛತ್ತೀಸಗಢದಲ್ಲಿ ನ.7 ಮತ್ತು ನ.17 ರಂದು ಎರಡು ಹಂತಗಳಲ್ಲಿ ಮತದಾನ ಇರುತ್ತದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನ.17 ರಂದು ಒಂದೇ ಹಂತದಲ್ಲಿ ನಡೆಯಲಿದೆ. ನಂತರ ನ.23 ರಂದು ರಾಜಸ್ಥಾನದಲ್ಲಿ ಮತ್ತು ನ.30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ
Advertisement
Advertisement
ಡಿಸೆಂಬರ್ 3 ಕ್ಕೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Advertisement
ಮಿಜೋರಾಂನಲ್ಲಿ 8.52 ಲಕ್ಷ, ಛತ್ತೀಸ್ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರಿದ್ದಾರೆ. ಸುಮಾರು 60 ಲಕ್ಷ ಯುವಜನತೆ ಮೊದಲ ಬಾರಿಗೆ (18-19 ವರ್ಷ) 5 ರಾಜ್ಯಗಳ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಅರ್ಹತಾ ದಿನಾಂಕಗಳ ತಿದ್ದುಪಡಿಯಿಂದಾಗಿ 15.39 ಲಕ್ಷ ಯುವ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಇದನ್ನೂ ಓದಿ: ಇಸ್ರೇಲ್ನಲ್ಲಿ ಸಿಲುಕಿದ್ದ 18,000 ಭಾರತೀಯರು ಸೇಫ್
ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
Web Stories