ರಾಮನಗರ: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ (Cauvery river) ನಡೆದಿದೆ.
ಮೃತರನ್ನು ಹರ್ಷಿತಾ (20), ಅಭಿಷೇಕ್ (20), ತೇಜಸ್ (21), ವರ್ಷ (20) ಹಾಗೂ ನೇಹಾ (19) ಎಂದು ಗುರುತಿಸಲಾಗಿದೆ. ಇನ್ನುಳಿದ 7ಮಂದಿ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಮೃತರು ಬೆಂಗಳೂರು (Bengaluru) ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಪ್ರವಾಸಕ್ಕೆ ಬಂದಿದ್ದ ಇವರು, ಮಧ್ಯಾಹ್ನ ನೀರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ನದಿಯ ಸುಳಿಯಲ್ಲಿ ಸಿಲುಕಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಹೋದರಿಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ಳು!
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪೊಲೀಸರು ನೀರಿನಿಂದ ಹೊರಗೆ ತೆಗೆದಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಂಧನ ತಪ್ಪಿಸಿಕೊಳ್ಳಲು ವೇಷ ಬದಲಿಸಿಕೊಂಡಿದ್ದ ನಟ ಸಾಹಿಲ್