ಮಂಗಳೂರು: ಈಜಲು ಹೋದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಲ್ಲರಪಟ್ನದಲ್ಲಿರೋ ಫಲ್ಗುಣಿ ನದಿಯಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಅಸ್ಲಾಂ(17), ರಮೀಜ್ (17), ಅಜ್ಮಲ್ (18), ಮುದಾಸಿರ್ (17), ಸವಾದ್ (17) ಎಂದು ಗುರುತಿಸಲಾಗಿದೆ.
ಸೋಮವಾರ ರಜಾ ದಿನವಾಗಿದ್ದರಿಂದ ಸಂಜೆ ವಿದ್ಯಾರ್ಥಿಗಳು ನದಿಯಲ್ಲಿ ಈಜಲೆಂದು ತೆರಳಿದ್ದರು. ಹೀಗೆ ನದಿಯಲ್ಲಿ ಸ್ನಾನಕ್ಕೆಂದು ಹೋದ ಐವರು ರಾತ್ರಿಯಾದರೂ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಪೋಷಕರು ನದಿ ದಡಕ್ಕೆ ಬಂದಿದ್ದಾರೆ. ಈ ವೇಳೆ ಐವರ ವಸ್ತ್ರ ಹಾಗೂ ಮೊಬೈಲ್ ಪತ್ತೆಯಾಗಿದೆ. ಇದರಿಂದ ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ ಎಂದು ಪೋಷಕರಿಗೆ ತಿಳಿದಿದೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಈಜಲು ಹೋದ ಮೂವರು ಹೆಣ್ಣುಮಕ್ಕಳು ಸೇರಿ ಐವರು ನೀರುಪಾಲು!
ಸದ್ಯ ಐವರಲ್ಲಿ ಅಸ್ಲಾಂ ಎಂಬಾತನ ಶವ ಪತ್ತೆಯಾಗಿದ್ದು, ಇನ್ನು ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.