Saturday, 21st July 2018

Recent News

ಮರಕ್ಕೆ ಗುದ್ದಿ, ಅಂಗಡಿ ಛಾವಣಿಗೆ ಡಿಕ್ಕಿ ಹೊಡೆದು ತಮಿಳುನಾಡು ಕಾರ್ ಪಲ್ಟಿ- ಐವರಿಗೆ ಗಾಯ

ಮಂಡ್ಯ: ತಮಿಳುನಾಡು ನೊಂದಣಿಯ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ಲೋಕಪಾವನಿ ಸೇತುವೆ ಸಮೀಪ ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಮರಕ್ಕೆ ಗುದ್ದಿ ಬಳಿಕ ಅಂಗಡಿಯ ಛಾವಣಿಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಈ ವೇಳೆ ಮರದ ಬುಡದಲ್ಲಿ ಕುಳಿತಿದ್ದ ಸ್ಥಳೀಯ ಜಿ.ಜಯಕುಮಾರ್ ಕಾರಿನಿಂದ ತಪ್ಪಿಸಿಕೊಳ್ಳಲು ಪಕ್ಕಕ್ಕೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ.

ಪಲ್ಟಿ ಹೊಡೆದ ಪರಿಣಾಮ ಕಾರಿನ ಒಳಗಿದ್ದ ತಮಿಳುನಾಡು ಮೂಲದ ದಂಪತಿ, ಇಬ್ಬರು ಮಕ್ಕಳು ಮತ್ತು ಕಾರಿನ ಚಾಲಕ ಸಹ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಗಾಯಾಳುಗಳ ವಿವರ ತಿಳಿದುಬಂದಿಲ್ಲ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *