ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅವಳಿ ಎನ್‍ಕೌಂಟರ್ ನಡೆದಿದ್ದು, ಪರಿಣಾಮ ಜೆಇಎಂ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 5 ಭಯೋತ್ಪಾದಕರು ಹತರಾಗಿದ್ದಾರೆ.
ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಇಂದು ಟ್ವಿಟ್ಟರ್ ನಲ್ಲಿ, ಕಳೆದ 12 ಗಂಟೆಗಳಲ್ಲಿ ನಡೆದ ಅವಳಿ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ(ಎಲ್‍ಇಟಿ) ಮತ್ತು ಜೈಶ್-ಎ-ಮೊಹಮ್ಮದ್(ಜೆಇಎಂ) ಜೊತೆ ಸಂಬಂಧ ಹೊಂದಿದ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂಗಗಳ ಕಾಟ – ಪಂಚಾಯ್ತಿ ಎಲೆಕ್ಷನ್ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧಾರ
Advertisement
2 operations were launched during the night at Charareshrif in district Budgam and at Naira in district Pulwama. Both have concluded with killing of 01 terrorist in Budgam and 4 in Pulwama including two top JEM Commanders Zahid Wani and an Foreign terrorist from Pakistan.
— J&K Police (@JmuKmrPolice) January 30, 2022
Advertisement
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳೊಂದಿಗೆ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆದಿದ್ದು, ಹತ್ಯೆಗೀಡಾದ ಐವರು ಭಯೋತ್ಪಾದಕರ ಪೈಕಿ ಜೆಇಎಂ ಕಮಾಂಡರ್ ಭಯೋತ್ಪಾದಕ ಜಾಹಿದ್ ವಾನಿ ಕೂಡ ಇದ್ದಾನೆ. ಪಾಕಿಸ್ತಾನದ 5 ಮಂದಿ ಭಯೋತ್ಪಾದಕರು ಕಳೆದ 12 ಗಂಟೆಗಳಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ. ನಮಗೆ ಇದು ದೊಡ್ಡ ಯಶಸ್ಸು ಎಂದು ಅವರು ಬರೆದುಕೊಂಡಿದ್ದಾರೆ.
Advertisement
Advertisement
ಪೊಲೀಸರ ಪ್ರಕಾರ, ಪುಲ್ವಾಮಾ ಜಿಲ್ಲೆಯ ನೈರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಈ ವೇಳೆ ಭಯೋತ್ಪಾದಕರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಹಲವು ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ ದಾಳಿ- 6 ಇಸ್ಲಾಮಿಕ್ ಸ್ಟೇಟ್ ಉಗ್ರರ ಹತ್ಯೆ
ಬುದ್ಗಾಮ್‍ನ ಚ್ರಾರ್-ಇ-ಶರೀಫ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಮೃತನಾಗಿದ್ದಾನೆ. ಎಕೆ 56 ರೈಫಲ್ ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.