ಶ್ರೀನಗರ: ಜಮ್ಮು ಕಾಶ್ಮೀರದ (Jammu And Kashmir) ಕುಪ್ವಾರದ (Kupwara) ಗಡಿ ನಿಯಂತ್ರಣಾ ರೇಖೆ ಬಳಿ ಒಳನುಸುಳುತ್ತಿದ್ದ (Infiltration) 5 ಭಯೋತ್ಪಾದಕರನ್ನು ಭದ್ರತಾ ಪಡೆ ಗುಂಡಿಕ್ಕಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಎಲ್‌ಒಸಿ (LOC) ಬಳಿಯ ಜುಮಗುಂಡ್ (Jumagund) ಪ್ರದೇಶದಲ್ಲಿ ಖಚಿತ ಮಾಹಿತಿ ಮೇರೆಗೆ ಗುರುವಾರ ರಾತ್ರಿ ಭದ್ರತಾ ಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮುಂಜಾನೆ ವೇಳೆ 5 ಭಯೋತ್ಪಾದಕರನ್ನು ಹತ್ತಿಕ್ಕಲಾಗಿದೆ. 5 ವಿದೇಶಿ ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಿದ್ದು, ಆ ಪ್ರದೇಶದಲ್ಲಿ ಶೋಧ ಕಾರ್ಯಗಳು ಮುಂದುವರೆಯುತ್ತಿವೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ವಿಜಯ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು
Advertisement
Advertisement
ಪೂಂಚ್ ಸೆಕ್ಟರ್‌ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ವಿಫಲಗೊಳಿಸಿದ ಭದ್ರತಾ ಪಡೆ, ಭಯೋತ್ಪಾದಕರಿಂದ ಬೃಹತ್ ಪ್ರಮಾಣದ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರ ವಶಪಡಿಸಿಕೊಂಡಿದೆ. ಫೆಬ್ರವರಿಯಿಂದ ಇಲ್ಲಿಯವರೆಗೆ ಒಟ್ಟು 10 ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Cyclone Biparjoy : 140 ಕಿ.ಮೀ ವೇಗದಲ್ಲಿ ಆರ್ಭಟ – ಗುಜರಾತ್ ತೀರದಲ್ಲಿಅಲ್ಲೋಲ ಕಲ್ಲೋಲ
Advertisement
ಇದೇ ಜೂನ್ 13ರಂದು ಕುಪ್ವಾರದ ಗಡಿ ನಿಯಂತ್ರಣಾ ರೇಖೆ ಇಬ್ಬರು ಭಯೋತ್ಪಾದಕರನ್ನು (Terrorists) ಭದ್ರತಾಪಡೆ (Security Force) ಹತ್ಯೆ ಮಾಡಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ. ಅಲ್ಲದೇ ಈ ವರ್ಷದಲ್ಲಿ 5 ಭಯೋತ್ಪಾದಕರನ್ನು ಏಕಕಾಲದಲ್ಲಿ ಎನ್‌ಕೌಂಟರ್ ಮಾಡಿರುವುದು ಇದೇ ಮೊದಲಾಗಿದೆ. ಇದನ್ನೂ ಓದಿ: ಪತ್ನಿಯನ್ನು ಅಪ್ಪಿಕೊಂಡು ಹೊಡೆದ ಗುಂಡು ತನಗೂ ಮುಳುವಾಯ್ತು- ದಂಪತಿ ಸಾವು
Advertisement
ಭದ್ರತಾ ಪಡೆ ಭಯೋತ್ಪಾದಕರಿಂದ ಒಟ್ಟು 2 ಎಕೆ 47, 48 ಸುತ್ತಿನ ಮದ್ದುಗುಂಡುಗಳು, 4 ನಿಯತಕಾಲಿಕಗಳು, 4 ಹ್ಯಾಂಡ್ ಗ್ರೆನೇಡ್‌ಗಳು ಮತ್ತು ಸಿಗರೇಟ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Biparjoy Cyclone ಅಬ್ಬರ ನಡುವೆ ಹೆಣ್ಣುಮಗುವಿಗೆ ‘ಬಿಪರ್‌ಜಾಯ್’ ಅಂತ ಹೆಸರಿಟ್ಟ ದಂಪತಿ