– ಆರೋಗ್ಯ ವಿಮಾ ಯೋಜನೆ ಜಾರಿಗೆ ಕ್ರಮ
ಬೆಂಗಳೂರು: ಕಳೆದ ಒಂದು ತಿಂಗಳಿಂದಲೂ ಮುಷ್ಕರ ನಡೆಸುತ್ತಿರುವ ರಾಜ್ಯ ಅತಿಥಿ ಉಪನ್ಯಾಸಕರಿಗೆ (Guest Lecturers) 5 ಸಾವಿರ ವೇತನ ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಹೊಸ ವರ್ಷದ ಗಿಫ್ಟ್ ಕೊಟ್ಟಿದೆ.
Advertisement
ಶುಕ್ರವಾರ ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ (M.C.Sudhakar) ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ. ಹೆಚ್ಚು ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ: ಯತ್ನಾಳ್‌ಗೆ ಜೋಶಿ ಕಿವಿಮಾತು
Advertisement
Advertisement
ಅತಿಥಿ ಉಪನ್ಯಾಸಕರ ಬೇಡಿಕೆಯಲ್ಲಿ ಸೇವೆ ಕಾಯಂ ಬಹುಮುಖ್ಯ ಬೇಡಿಕೆಯಾಗಿದೆ. ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸುತ್ತಿದ್ದಾರೆ. ಇದರ ನಡುವೆ ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ ಒಂದು ರಜೆ ನೀಡಲಾಗುವುದು. ಅವರನ್ನು ಗೌರವದಿಂದ ನಡೆಸಿಕೊಳ್ಳಲಾಗುತ್ತದೆ. 60 ವರ್ಷ ಪೂರೈಸಿದಂತಹ ಅತಿಥಿ ಉಪನ್ಯಾಸಕರಿಗೆ ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
Advertisement
ಆರೋಗ್ಯ ವಿಮಾ ಯೋಜನೆ ಕೂಡ ಜಾರಿಗೊಳಿಸಲಾಗುತ್ತಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದಂತಹ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ – ಸಿಎಂ ಸೂಚನೆ
ಸೇವೆ ಕಾಯಂ, ನಿವೃತ್ತಿ ವೇತನದ ವ್ಯವಸ್ಥೆ, ಉದ್ಯೋಗ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ.