ವಿಜಯಪುರ: ಲಾರಿ ಹರಿದು ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಎಪಿಎಂಸಿ 2ನೇ ಗೇಟ್ ಬಳಿ ನಡೆದಿದೆ.
5 ವರ್ಷದ ಗೌತಮ್ ಪವಾರ್ ಮೃತ ದುರ್ದೈವಿ. ಗೌತಮ್ ಮನೆ ಸಮೀಪ ಆಟವಾಡುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿಯೊಂದು ಆತನ ಮೇಲೆ ಹರಿದಿದೆ. ಪರಿಣಾಮ ಬಾಲಕ ಲಾರಿ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದಾನೆ.
ಅಪಘಾತದಲ್ಲಿ ಬಾಲಕ ಲಾರಿ ಕೆಳಗೆ ಸಿಲುಕಿಕೊಂಡಿದ್ದರಿಂದ ಮೃತದೇಹ ಅಪ್ಪಚ್ಚಿಯಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದು ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.