ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಮಾಡಲು 5 ವರ್ಷಗಳ ಅವಧಿ ಸಾಲುವುದಿಲ್ಲ. ಅವರಿಗೆ ಮತ್ತಷ್ಟು ಅವಕಾಶಗಳು ಸಿಗಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಸರ್ಕಾರದ ಸಾಧನೆಯ ಪುಸ್ತಕ ತೆಗೆದುಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತ ಮಾಹಿತಿ ನೀಡಿದ್ದಾರೆ. ಆದರೆ ಈ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರಿಸಲು ಇನ್ನು ಕೆಲ ಅವಕಾಶಗಳು ಬೇಕಿದೆ. ಈ ನಿಟ್ಟಿನಲ್ಲಿ ಒಳ್ಳೆಯ ಕೆಲಸಕ್ಕೆ ನಾವೆಲ್ಲ ಬೆಂಬಲಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್‍ರನ್ನ ಭೇಟಿ ಮಾಡಿದ ಶ್ರೀರಾಮುಲು
Advertisement
Advertisement
2019 ರ ಲೋಕಾಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರದಲ್ಲಿ ಮೋದಿ ನಾಯಕತ್ವದ ಸರ್ಕಾರ ಮಾಡಿರುವ ಅಭಿವೃದ್ಧಿ ಸಯೋಜನೆಗಳ ಬಗ್ಗೆ ದೇಶದ ಗಣ್ಯರಿಗೆ ತಿಳಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ರಾಜ್ಯ ಬಿಜೆಪಿ ನಾಯಕರು ಕೂಡ ತಮ್ಮ ಸಂಪರ್ಕದಲ್ಲಿರುವ ಗಣ್ಯರಿಗೆ ಸರ್ಕಾರ ಸಾಧನೆ ವಿವರಿಸುವ ಪುಸ್ತಕ ನೀಡಿ ಮಾಹಿತಿ ನೀಡುತ್ತಿದ್ದಾರೆ. ಸದ್ಯ ಬಿಜೆಪಿ ಮುಖಂಡ ರಾಮ್‍ದಾಸ್ ಸೇರಿದಂತೆ ಹಲವು ಮುಖಂಡರು ಒಡೆಯರ್ ಅವರನ್ನು ಭೇಟಿ ಮಾಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಶಾಸಕ ಶ್ರೀರಾಮುಲು ಅವರು ಸಹ ನಟ ಯಶ್ ರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರದ ಸಾಧನೆಗಳನ್ನ ವಿವರಿಸಿದ್ದರು.
Advertisement
The Maharaja of Mysore, Sri Yaduveer Krishnadatta Chamaraja Wadiyar says that one must support the good work done by the Narendra Modi government and a few more terms are necessary to complete the good work that has started. #SamparkForSamarthan pic.twitter.com/1EwU8tSMMF
— BJP Karnataka (@BJP4Karnataka) July 7, 2018