ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ (Drainage) ಬಿದ್ದು ಬಾಲಕ (Boy) ಸಾವನ್ನಪ್ಪಿದ ಘಟನೆ ಬೀದರ್ (Bidar) ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.
5 ವರ್ಷದ ಅವಿನಾಶ್ ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾವನ್ನಪ್ಪಿರುವುದು ಗೊತ್ತಾಗಿದೆ. ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನಾಪತ್ತೆ

