– ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಬಿಹಾರ ಮೂಲದ ಸೈಕೋಪಾತ್
ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.
ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಧಾವಿಸಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ
ಇದೀಗ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಆತನಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.