ನವದೆಹಲಿ: ಮನೆಯಲ್ಲಿ ಒಬ್ಬಳೇ ಇದ್ದ 5 ವರ್ಷದ ಬಾಲಕಿ ಮೇಲೆ ನೆರೆಮನೆಯ ಅಪ್ರಾಪ್ತ ಹುಡುಗ ಅತ್ಯಾಚಾರವೆಸಗಿದ ಘಟನೆ ನೈಋತ್ಯ ದೆಹಲಿಯ (New Delhi) ಕಪಶೇರಾ (Kapashera) ಪ್ರದೇಶದಲ್ಲಿ ನಡೆದಿದೆ.
ಸಂತ್ರಸ್ತೆಯ ಸಹೋದರನ ಸ್ನೇಹಿತನಾದ 14ರ ಹುಡುಗ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಬಂಧಿಸಿ ಅಬ್ಸರ್ವೇಶನ್ ಹೋಮ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
14 ವರ್ಷದ ಬಾಲಕ ಮಾಡಿದ ಅಪರಾಧದ ಬಗ್ಗೆ ಕಪಶೇರಾ ಪೊಲೀಸ್ ಠಾಣೆಯಲ್ಲಿ ಪಿಸಿಆರ್ ಕರೆ ಸ್ವೀಕರಿಸಲಾಯಿತು. ತಕ್ಷಣವೇ ದೆಹಲಿ ಪೊಲೀಸರ ತಂಡವೊಂದನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು. ಅಲ್ಲಿ ಸಂತ್ರಸ್ತೆ ಪೋಷಕರು ಘಟನೆಯ ಬಗ್ಗೆ ಮಾಹಿತಿ ನೀಡಿದರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿಯ ವಿದ್ಯಾಮಂದಿರ ಪಿಜಿ ಶೈಕ್ಷಣಿಕ ಮೇಳ – ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್
ಬಳಿಕ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಸಂತ್ರಸ್ತೆಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಸಂತ್ರಸ್ತೆಯನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಈ ವೇಳೆ ನೆರೆಮನೆಯ ಹುಡುಗ ಕೃತ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ಹಗರಣ ಆರೋಪ ಪ್ರಕರಣ – ಸಿಎಂ ಕೈ ಸೇರಿದ ತನಿಖಾ ಆಯೋಗದ ವರದಿ
ಘಟನೆ ಸಂಬಂಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 65 (2) (12 ವರ್ಷದೊಳಗಿನ ಬಾಲಕಿಯ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೆಕ್ಷನ್ 6 (ಲೈಂಗಿಕ ದೌರ್ಜನ್ಯಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Haryana Polls Dates | ಹರಿಯಾಣ ಚುನಾವಣೆ ದಿನಾಂಕ ಬದಲು – ಅಕ್ಟೋಬರ್ 5ಕ್ಕೆ ಮತದಾನ