ಹುಬ್ಬಳ್ಳಿ: ಮೇ 20ರಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 5 ವರ್ಷದ ಮಗು ಸೇರಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
Advertisement
Advertisement
ಆರಾಧ್ಯ ಹುತಮಲ್ಲಣ್ಣವರ (5) ಹಾಗೂ ಮುತ್ತು ಮರಿಗೌಡ (16) ಎಂಬವರೇ ಮೃತಪಟ್ಟವರು. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನು 6 ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು
Advertisement
ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ @JoshiPralhad ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (Modi Ka Parivar) (@BSBommai) May 22, 2022
Advertisement
ಇದೇ ಮೇ 20 ರಂದು ಧಾರವಾಡದ ಬಾಡ ಬಳಿ ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಮೃತಪಟ್ಟಿದ್ದರು. ಐಸಿಯುನಲ್ಲಿದ್ದ ಇಬ್ಬರು ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.